ನವದೆಹಲಿ: ದೇಶದ ಅತಿದೊಡ್ಡ ಖಾಸಗಿ ಪೆಟ್ರೋಲಿಯಂ ಸಂಸ್ಥೆಯಾಗಿರುವ ನಯಾರಾ ಎನರ್ಜಿ (Nayara Energy) ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆನ್ ಬೆಲೆಯನ್ನ ಇಳಿಕೆ ಮಾಡಿದೆ. ಪೆಟ್ರೋಲ್ ಬೆಲೆಯನ್ನ 5 ರೂ ಹಾಗೂ ಡೀಸೆಲ್ ಬೆಲೆಯನ್ನ ಲೀಟರ್‌ಗೆ 3 ರೂಪಾಯಿ ಇಳಿಕೆಯಾಗಿದೆ.
ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗಿದ್ದು, ಅಮೇರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಜಾರಿಯಾಗಿದೆ. ಇದರ ಪರಿಣಾಮವಾಗಿ ದೇಶಾದ್ಯಂತ ಜಾಗತಿಕ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾಗಿದ್ದು, ಹೀಗಾಗಿ ದೇಶಾದ್ಯಂತ ನಯಾರಾದ 7,000 ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಪರಿಷ್ಕೃತ ದರಗಳು ಜಾರಿಗೆ ಬಂದಿವೆ. ಆದರೂ, ಅಂತಿಮ ಚಿಲ್ಲರೆ ಬೆಲೆ ವ್ಯಾಟ್‌ನಂತಹ ಸ್ಥಳೀಯ ತೆರಿಗೆಗಳನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರದಲ್ಲಿ ಬದಲಾಗುತ್ತವೆ.
ಪಶ್ಚಿಮ ಏಷ್ಯಾದಲ್ಲಿ ಯುದ್ಧ ಅಂತ್ಯಗೊಂಡು ಪ್ರಮುಖ ಸಮುದ್ರ ಮಾರ್ಗವನ್ನು ಮತ್ತೆ ತೆರೆದ ನಂತರ ಕಚ್ಚಾ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲ ಪೂರೈಕೆಯನ್ನು ಪುನಃಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ. ಇತ್ತೀಚಿನ ವಾರಗಳಲ್ಲಿ ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಕಡಿಮೆಯಾಗಿದೆ. ಆದರೆ ಸರ್ಕಾರಿ ಸ್ವಾಮ್ಯದ ಇಂಧನ ಕೇಂದ್ರಗಳಾದ ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಇಂಡಿಯನ್ ಆಯಿಲ್‌ನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತವಾಗಿದೆ. ಈ ಮೂಲಕ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 19 ಕೆಜಿ ಸಿಲಿಂಡರ್ ಬೆಲೆ 2,930 ರೂ.ಗೆ ಇಳಿಕೆಯಾಗಿದೆ. ಜುಲೈ 1 ರಿಂದಲೇ ಹೊಸ ದರ ಜಾರಿಗೆ ಬಂದಿದ್ದು,