ನವದೆಹಲಿ : ದೇಶಾದ್ಯಂತ ನಡೆದ NEET ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಲ್ಲಾ ಎಫ್ಐಆರ್ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಸಂವಿಧಾನದ ಅನುಚ್ಛೇದ 142ರ ಅಡಿಯಲ್ಲಿ ತನಗೆ ಇರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ನ್ಯಾಯಾಲಯ ಈ ತೀರ್ಪು ನೀಡಿದೆ. ಆದರೆ, ಗಂಭೀರ ಕ್ರಿಮಿನಲ್ ಹಿನ್ನೆಲೆ ಹೊಂದಿರುವ 2,873 ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿರುವ ಸುಪ್ರೀಂ ಕೋರ್ಟ್, ಅವರ ವಿರುದ್ಧ ಹೊಸದಾಗಿ ಎಫ್ಐಆರ್ ದಾಖಲಿಸಲು ದಿಲ್ಲಿ ಪೊಲೀಸರಿಗೆ ಅನುಮತಿ ನೀಡಿದೆ. ಇದೇ ವೇಳೆ, NEET ಸಂಬಂಧಿತ ಘಟನೆಗಳ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಮೂರು ತಿಂಗಳೊಳಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.
NEET ಪ್ರತಿಭಟನೆ; ವಿದ್ಯಾರ್ಥಿಗಳ ವಿರುದ್ಧದ FIR ರದ್ದುಗೊಳಿಸಿದ ಸುಪ್ರೀಂ