Search


NEET ಮರು ಪರೀಕ್ಷೆಗೆ ಮುಹೂರ್ತ ಫಿಕ್ಸ್‌,; ಜೂನ್‌ 21ಕ್ಕೆ ಪರೀಕ್ಷೆ ನಿಗದಿ

ನವದೆಹಲಿ : ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮರು ಪರೀಕ್ಷೆಯ ದಿನಾಂಕವನ್ನ ನಿಗದಿ ಪಡಿಸಿದ್ದು. ಮುಂದಿನ ತಿಂಗಳು ಅಂದರೆ ಜೂನ್‌ 21ರಂದು ನೀಟ್‌-ಯುಜಿಗೆ ಮರು ಪರೀಕ್ಷೆ ನಡೆಯಲಿದೆ.

ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನ ನಿರ್ಧರಿಸುವ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ದೀರ್ಘವಾಗಿ ಚರ್ಚಿಸಲಾಗಿದ್ದು, ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು, ಮತ್ತು ಸಿಬಿಎಸ್‌ಯ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರು ಆರೋಪಿಗಳನ್ನ ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನ ಬಂಧಿಸಿದೆ.

ಇದರೊಟ್ಟಿಗೆ ದೇಶದ ಹಲವಡೆ ವಿದ್ಯಾರ್ಥಿ ಸಂಘಟನೆಗಳು NTA ವಿರುದ್ದ ಪ್ರತಿಭಟನೆ ನಡೆಸುತ್ತಿದ್ದು. ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್‌ ರಾಜೀನಾಮೆಗೆ ಒತ್ತಾಯಿಸಿದ್ದಾರೆ, ಇದರ ನಡುವೆಯೇ ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆ ರದ್ದಾದ ಆತಂಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ರವಿಕುಮಾರ್ ಎನ್ ನ್ಯೂಸ್ ಡೆಸ್ಕ್ 

By thebigbulletin.com - 15-05-2026


Ads in Post