Search


ನಾಳೆ ನೂತನ ಸಿಎಂ ಆಯ್ಕೆ: ಸೋಮವಾರ ಪ್ರಮಾಣ ವಚನಕ್ಕೆ ಸಿದ್ದತೆ..!

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿ ಆಯ್ಕೆಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ನಾಳೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು. ಈ ಸಭೆಯಲ್ಲಿ ಡಿಕೆ ಶಿವಕುಮಾರ್‌ ನೂತನ ಸಿಎಂ ಆಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು. ಈಗಾಗಲೇ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದ್ದತೆಗಳು ಆರಂಭಗೊಂಡಿವೆ.

ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದು,ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅವರು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಇದರಂತೆ ನೂತನ ಸರ್ಕಾರ, ಸಂಪುಟ ರಚನೆಯ ಪ್ರಕ್ರಿಯೆಯ ಭಾಗವಾಗಿ ಶಾಸಕಾಂಗ ಸಭೆಯನ್ನು ಶನಿವಾರ(ಮೇ.30) ಸಂಜೆ 4 ಗಂಟೆಗೆ ನಿಗದಿ ಮಾಡಲಾಗಿದ್ದು, ಸಭೆಯಲ್ಲಿ ಪಕ್ಷದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಬಳಿಕ ಸರ್ಕಾರ ರಚನೆ ಹಕ್ಕು ಮಂಡಿಸಲಾಗುತ್ತದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ ಸಂಜೆ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಕಾಂಗ್ರೆಸ್ ತನ್ನ ಎಲ್ಲಾ ಶಾಸಕರಿಗೆ ಸಭೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ವಿಧಾನ ಪರಿಷತ್ ಸಭಾನಾಯಕ ಎನ್..ಎಸ್. ಭೋಸರಾಜು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಡಿಕೆಶಿ ಪಟ್ಟಾಭಿಷೇಕಕ್ಕೆ ಸಿದ್ದತೆ..!

ಈ ನಡುವೆ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದು ಅಧಿಕೃತವಾಗಿ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡುವುದು ಬಹುತೇಕ ಖಚಿತವಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ಸೋಮವಾರ ಸಂಜೆ ವಿಧಾನ ಸೌಧದ ಮೆಟ್ಟಿಲುಗಳ ಮೇಲೆ,  ಗೊದೋಳಿ ಮುಹೂರ್ತದಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

By Ravikumar - 29-05-2026


Ads in Post