Search


ಶತಕದತ್ತ ಈರುಳ್ಳಿ ದರ; 800 ಮೆಟ್ರಿಕ್‌ ಟನ್‌ ಆಮದು ಮಾಡಿಕೊಳ್ತಿದೆ ಭಾರತ

ನವದೆಹಲಿ: ದೇಶದಲ್ಲಿ ಮಳೆ ಕೊರತೆಯಿಂದಾಗಿ ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿದ್ದು, ಈರುಳ್ಳಿ ಬೆಲೆ ಶೀಘ್ರದಲ್ಲೇ ಶತಕ ಮುಟ್ಟುವ ಸಾಧ್ಯತೆ ಇದೆ. ಮಳೆ ಕೊರತೆಯಿಂದಾಗಿ ಈರುಳ್ಳಿ ಇಳುವರಿಯಲ್ಲಿ ಕುಸಿತವಾಗಿದ್ದು, ಈಗಾಗಲೇ ರಾಜ್ಯದಲ್ಲಿ ಈರುಳ್ಳಿ ಬೆಲೆ 60ರಿಂದ 75ಕ್ಕೆ ತಲುಪಿದೆ, ಇದೇ ಪರಿಸ್ಥಿತಿ ಮುಂದುವರಿದರೆ ಕೆಲವೇ ದಿನಗಳಲ್ಲಿ ಈರುಳ್ಳಿ ದರ 100ರ ಗಡಿ ದಾಟುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ. ಈ ಕುರಿತು ಎಚ್ಚೆತ್ತಿರುವ ಕೇಂದ್ರ ಸರ್ಕಾರ ಸುಮಾರು 800 ಟನ್‌ ಈರುಳ್ಳಿನ್ನ ಆಮದು ಮಾಡಿಕೊಳ್ಳುತ್ತಿದ್ದ, ವಿವಿಧ ನಗರಗಳಿಗೆ ಸರಬರಾಜು ಮಾಡಿಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ʻನಾಸಿಕ್ ನಿಂದ ಕಂದಾ ಎಕ್ಸ್ ಪ್ರೆಸ್ ವಿಶೇಷ ರೈಲುಗಳಲ್ಲಿ 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿ (onion)  ಪೂರೈಸಲಾಗುತ್ತಿದೆ. ಆರಂಭಿಕವಾಗಿ ಚೆನ್ನೈ, ಮಧುರೈ, ದೆಹಲಿ, ಎರ್ನಾಕುಲಂ ಮತ್ತು ಗುವಾಹಟಿ ನಗರಗಳಿಗೆ ಕಂದಾ ಎಕ್ಸ್ ಪ್ರೆಸ್ ರೈಲು ಮೂಲಕ ಈರುಳ್ಳಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಇತರೆ ನಗರಗಳಿಗೂ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಬಫರ್ ದಾಸ್ತಾನಿನ ಈರುಳ್ಳಿಯನ್ನು 35 ರೂಪಾಯಿ ಕೆಜಿ ದರದಲ್ಲಿ NCCF, NAFED ಮತ್ತು ಕೇಂದ್ರೀಯ ಭಂಡಾರ್ ಮೂಲಕ ಶೀಘ್ರದಲ್ಲೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಪ್ರಮುಖ ನಗರಗಳಿಗೆ 800 ಮೆಟ್ರಿಕ್ ಟನ್ ಈರುಳ್ಳಿಯನ್ನು ‘ಕಂದಾ ಎಕ್ಸ್‌ಪ್ರೆಸ್’ ವಿಶೇಷ ರೈಲುಗಳಲ್ಲಿ ನಾಸಿಕ್‌ನಿಂದ ಸಾಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಮತ್ತು ಲಭ್ಯತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಬೆಲೆ ಸ್ಥಿರತೆ ಕಾಯ್ದುಕೊಳ್ಳಲು ಬೆಂಬಲ ಬೆಲೆ ನೀಡುವ ಮೂಲಕ ಗ್ರಾಹಕರು ಮತ್ತು ರೈತರ ಹಿತಾಸಕ್ತಿ ಕಾಪಾಡಲಾಗುತ್ತಿದೆ ಎಂದು ಹೇಳಿದ್ದಾರೆ.

By Ravikumar - 25-08-2026


Ads in Post