ಬೆಂಗಳೂರು: ದೇಶಾದ್ಯಂತ ಅಕ್ರಮ ನುಸುಳುಕೋರರ ವಿರುದ್ಧ ದೊಡ್ಡ ಕಾರ್ಯಚರಣೆ ನಡೆಯುತ್ತಿದ್ದು, ಸಾವಿರಾರು ಅಕ್ರಮ ವಲಸಿಗರನ್ನ ಬಂಧಿಸಲಾಗಿದೆ, ಇದರ ಭಾಗವಾಗಿ ರಾಜ್ಯದಲ್ಲಿಯೂ ಅಕ್ರಮ ನುಸುಳುಕೋರರ ವಿರುದ್ಧ ರಾಜ್ಯ ಪೊಲೀಸರು ಸಮರ ಸಾರಿದ್ದು. ಈವರೆಗೂ ಸುಮಾರು 911 ಜನ ಅಕ್ರಮ ವಲಸಿಗರನ್ನ ಗುರುತಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಗೋಪಿನಾಥ್ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ. ʻಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್ ಅವಧಿ ಇರುವ ವಿದೇಶಿಗರು 5304 ಜನ ಇದ್ದಾರೆ. ವೀಸಾ, ಪಾಸ್‌ಪೋರ್ಟ್ ಅವಧಿ ಮೀರಿದ್ದರೂ ಅಕ್ರಮವಾಗಿ 446 ವಿದೇಶಿಗರು ಇದ್ದಾರೆ. 3 ವರ್ಷಗಳಲ್ಲಿ ದೇಶದೊಳಗೆ ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ನೆಲೆಸಿರುವ ವಿದೇಶಿಗರ ಮಾಹಿತಿ ಇಲ್ಲ. ಆದರೆ 3 ವರ್ಷಗಳಲ್ಲಿ 911 ಜನ ಅಕ್ರಮ ವಲಸಿಗರನ್ನು ಇಲಾಖೆ ಗುರುತಿಸಿದೆ ಎಂದು ಹೇಳಿದ್ದಾರೆ.
ಇನ್ನು ಈವರೆಗೂ ಪತ್ತೆಯಾಗಿರುವ ಅಕ್ರಮ ನಿವಾಸಿಗಳ ಪೈಕ ʻಬಾಂಗ್ಲಾದೇಶದ 868, ಪಾಕಿಸ್ತಾನ 20, ನೈಜೀರಿಯಾ 13, ಶ್ರೀಲಂಕಾ 8, ಮಯನ್ಮಾರ್ 01, ಉಗಾಂಡಾದವರು ಒಬ್ಬರು ಇದ್ದಾರೆ. 31 ದೇಶದ 365 ವಿದೇಶಿಗರು ಅಪರಾಧ ಕೃತ್ಯದಲ್ಲಿ ಭಾಗಿಯಾಗಿರೋ ಮಾಹಿತಿಯನ್ನು ಗೃಹ ಇಲಾಖೆ ಸದನದಲ್ಲಿ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದ ವಲಸಿಗರ ವಿರುದ್ಧದ ಕಾರ್ಯಚರಣೆಯನ್ನ ವಿರೋಧಿಸಿಕೊಂಡೆ ರಾಜ್ಯದಲ್ಲಿ ಪೊಲೀಸರು ಅಕ್ರಮ ವಲಸಿಗರ ವಿರುದ್ಧ ಕಾರ್ಯಚರಣೆಯನ್ನ ತೀವ್ರಗೊಳಿಸಿದೆ.