Search


ಮಸೀದಿ ಮುಂದೆ ಮೆರವಣಿಗೆ ಮಾಡದಂತೆ ಪೊಲೀಸ್ ಎಚ್ಚರಿಕೆ; ಪೊಲೀಸರು ಸ್ಟೇಷನ್ನಿಗೆ ನುಗ್ತೀನಿ ಹುಷಾರ್ ಎಂದ ಪ್ರತಾಪ್ ಸಿಂಹ

ಮೈಸೂರು: ಗಣೇಶ ಮೆರವಣಿಗೆ ವೇಳೆ ಮಸೀದಿಗಳ ಮುಂದೆ ಮೆರವಣಿಗೆ ನಡೆಸದಂತೆ ಪೊಲೀಸರು ವಿಧಿಸಿರುವ ನಿರ್ಬಂಧಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ಹಾಗೂ ಟಿ. ನರಸೀಪುರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ತಿಳಿಸಿದ್ದಾರೆ. ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದು, ಗಲಭೆ ಸೃಷ್ಟಿಸುವುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಘಟನೆಗಳು ನಡೆದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೆ ತೀವ್ರ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, “ಇನ್ನೊಂದು ಸಾರಿ ಅಂತಹ ಮಾತು ನಿಮ್ಮ ಬಾಯಿಂದ ಬಂದರೆ, ನಿಮ್ಮ ಠಾಣೆಗೆ ಬಂದು ನುಗ್ಗುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ. ಅಸಹಾಯಕ ಯುವಕರ ಮೇಲೆ ಪೌರುಷ ತೋರಿಸುವ ಬದಲು, ತಮ್ಮೊಂದಿಗೆ ಪೌರುಷ ತೋರಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದಾರೆ.

ಗಣೇಶೋತ್ಸವದ ಸಂದರ್ಭದಲ್ಲಿ ಮಾತ್ರ ಮಸೀದಿಗಳ ಮುಂದೆ ಪೊಲೀಸ್ ಭದ್ರತೆ ಹಾಗೂ ನಿರ್ಬಂಧಗಳ ಬಗ್ಗೆ ಮಾತನಾಡಲಾಗುತ್ತದೆ. ಆದರೆ ಮೊಹರಂ ಅಥವಾ ಈದ್ ಮೆರವಣಿಗೆಗಳ ಸಂದರ್ಭದಲ್ಲಿ ದೇವಸ್ಥಾನಗಳ ಮುಂದೆ ಇದೇ ರೀತಿಯ ಭದ್ರತೆ ಮತ್ತು ನಿರ್ಬಂಧಗಳನ್ನು ಏಕೆ ವಿಧಿಸಲಾಗುವುದಿಲ್ಲ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಪೊಲೀಸರ ಕ್ರಮ ಏಕಪಕ್ಷೀಯವಾಗಿದೆ ಎಂದು ಆರೋಪಿಸಿರುವ ಅವರು, ಎಲ್ಲ ಧರ್ಮಗಳ ಮೆರವಣಿಗೆಗಳಿಗೂ ಒಂದೇ ರೀತಿಯ ನಿಯಮಗಳು ಅನ್ವಯವಾಗಬೇಕು ಎಂದು ಒತ್ತಾಯಿಸಿದ್ದಾರೆ.

By Ravikumar - 12-09-2026


Ads in Post