Search


ಭಾನುವಾರ ಮತ್ತೊಂದು ಬೆಲೆ ಏರಿಕೆ ಶಾಕ್‌ : ಗೃಹ ಬಳಕೆ LPG ಸಿಲಿಂಡರ್‌ ಬೆಲೆ ಭಾರಿ ಏರಿಕೆ..!

ಬೆಂಗಳೂರು: ಭಾನುವಾರ ಬೆಳಂಬೆಳ್ಳಿಗ್ಗೆಯೇ ಜನ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಶಾಕ್‌ ಕೊಟ್ಟಿದ್ದು, ಗೃಹ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ.

ಈಗಾಗಲೇ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದಿಂದಾಗಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಭಾರಿ ಒತ್ತಡ ಉಂಟಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಲು ಪ್ರಮುಖ ಕಾರಣವಾಗಿದ್ದು, ಇದರಿಂದಾಗಿ ತೈಲ ಕಂಪನಿಗಳು ಜನರ ಮೇಲೆ ಬರೆ ಎಳೆಯಲು ಮುಂದಾಗಿದೆ. 

ಇದಕ್ಕೂ ಮುನ್ನ, ಮಾರ್ಚ್ 7 ರಂದು ಪ್ರತಿ ಸಿಲಿಂಡರ್ ಬೆಲೆಯನ್ನು 60 ರೂ. ಹೆಚ್ಚಿಸಲಾಗಿತ್ತು. ಪ್ರಸ್ತುತ ಮಾಡಲಾದ ದರ ಏರಿಕೆಯು ತೈಲ ಕಂಪನಿಗಳಿಗೆ ದೇಶೀಯ ಎಲ್‌ಪಿಜಿ ಮಾರಾಟದಲ್ಲಿ ಆಗುತ್ತಿರುವ ನಷ್ಟವನ್ನು ಭಾಗಶಃ ಮಾತ್ರ ಸರಿದೂಗಿಸಿದೆ ಎಂದು ಮೂಲಗಳು ತಿಳಿಸಿವೆ.ಈ ದರ ಪರಿಷ್ಕರಣೆಯು ದೇಶಾದ್ಯಂತ ಅನ್ವಯವಾಗಲಿದ್ದರೂ, ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ವ್ಯತ್ಯಾಸದಿಂದಾಗಿ ಪ್ರತಿ ನಗರದಲ್ಲೂ ಸಿಲಿಂಡರ್‌ನ ಅಂತಿಮ ಬೆಲೆಯಲ್ಲಿ ವ್ಯತ್ಯಾಸವಿರಲಿದೆ.
 

By Ravikumar - 07-06-2026


Ads in Post