ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡಿದ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ, ಎಕ್ಷ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ನೂತನ ಸಿಎಂಗೆ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಕೂಡ ಡಿಕೆಶಿಗೆ ಶುಭಾಷಕ ಕೋರಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ ಜನರ ಕಲ್ಯಾಣಕ್ಕಾಗಿ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಎಂದು ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.
ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನ ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಕೈಯಲ್ಲಿ ಸಂವಿಧಾನ ಹಿಡಿದು ಡಿಕೆಶಿ ಪ್ರಮಾಣ...!
ಡಿ ಕೆ. ಶಿವಕುಮಾರ್ ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ದೀರ್ಘದಂಡ ನಾಮಸ್ಕಾರ ಮಾಡಿದರು. ಬಳಿಕ ಬಳಿಕ ವೇದಿಕೆ ಮೇಲೆಯೇ ಇರಿಸಿದ್ದ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.