Search


ಉಮರ್ ಖಾಲಿದ್ ಪರ ಪೋಸ್ಟರ್; ತಪ್ಪೇನಿದೆ ಎಂದು ಕೇಳಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಉಮರ್ ಖಾಲಿದ್ ಪರ ಪೋಸ್ಟರ್ ಪ್ರದರ್ಶಿಸಿದ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, "ಉಮರ್ ಖಾಲಿದ್ ಪರ ಪೋಸ್ಟರ್ ಪ್ರದರ್ಶಿಸುವುದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಐದು ವರ್ಷಗಳಿಂದ ಉಮರ್ ಖಾಲಿದ್ ಜೈಲಿನಲ್ಲಿದ್ದಾರೆ. ಇನ್ನೂ ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ. ನ್ಯಾಯಾಲಯದಿಂದ ಶಿಕ್ಷೆಯಾಗುವವರೆಗೆ ಯಾರನ್ನೂ ಅಪರಾಧಿ ಎಂದು ಕರೆಯಲು ಸಾಧ್ಯವಿಲ್ಲ. ಹೀಗಿರುವಾಗ ಅವರ ಪರವಾಗಿ ಪೋಸ್ಟರ್ ಹಿಡಿದರೆ ಅದರಲ್ಲಿ ತಪ್ಪೇನು?" ಎಂದು ಪ್ರಶ್ನಿಸಿದರು. ಜೊತೆಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಹರಿಪ್ರಸಾದ್, "ಭಿನ್ನಾಭಿಪ್ರಾಯ ಹೊಂದಿರುವವರನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಹರಿಪ್ರಸಾದ್ 'ಸರ್ಕಾರ ಪಾಕಿಸ್ತಾನದ ಮಾದರಿಯ ಆಡಳಿತ ನಡೆಸಲು ಯತ್ನಿಸುತ್ತಿದೆ, ಪ್ರತಿಭಟನಾ ಸ್ಥಳದಲ್ಲಿ ಉಮರ್ ಖಾಲಿದ್ ಹಾಗೂ ಶಾರ್ಜೀಲ್ ಇಮಾಮ್ ಪರ ಪೋಸ್ಟರ್‌ಗಳು ಕಾಣಿಸಿಕೊಂಡಿದ್ದರಿಂದ ಕೆಲಕಾಲ ಗೊಂದಲ ಉಂಟಾಯಿತು. ಪರಿಸ್ಥಿತಿ ಉದ್ವಿಗ್ನವಾಗದಂತೆ ಪೊಲೀಸರು ಪೋಸ್ಟರ್‌ಗಳನ್ನು ವಶಕ್ಕೆ ಪಡೆದರು. ಅಲ್ಲದೆ, ಕೆಲ ಪ್ರತಿಭಟನಾಕಾರರು ಪೋಸ್ಟರ್ ಹಿಡಿದಿದ್ದ ವಿದ್ಯಾರ್ಥಿನಿಗೆ ಇದು ಪ್ರತಿಭಟನೆಯ ಮೂಲ ಉದ್ದೇಶದಿಂದ ಗಮನ ಬೇರೆಡೆ ಸೆಳೆಯುತ್ತದೆ ಎಂದು ಹೇಳಿ ಸ್ಥಳದಿಂದ ತೆರಳುವಂತೆ ಸೂಚಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಕಾನೂನು ತಜ್ಞರ ಸಲಹೆ ಪಡೆಯಲಾಗಿದೆ

By Ravikumar - 25-07-2026


Ads in Post