Search


ಯತೀಂದ್ರಗೆ ಡಿಸಿಎಂ ಪಟ್ಟ..; ಸಿದ್ದು ಮುಂದೆ ಆಫರ್‌ಗಳ ಸುರಮಳೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಲು ಹೈಕಮಾಂಡ್‌ ಸೂಚಿಸಿದೆ. ಇದಕ್ಕೆ ಪ್ರತಿಯಾಗಿ ಸಿಎಂ ಎದುರು ರಾಹುಲ್‌ ಗಾಂಧಿ ಆಫರ್‌ಗಳ ಸುರಿಮಳೆಯನ್ನೆ ಸುರಿಸಿದ್ದಾರೆ ಎನ್ನಲಾಗಿದೆ. ಹೊಸ ಸಿಎಂ ಆಯ್ಕೆಯಾದ ನಂತರ ಯತೀಂದ್ರ ಸಿದ್ದರಾಮಯ್ಯರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡುತ್ತೇವೆ ಎಂಬ ಭರವಸೆಯನ್ನ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದುಗೆ ನೀಡಲಾಗಿದೆ ಎನ್ನಲಾಗಿದೆ.

ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಚರ್ಚೆಗೆ ಕಡೆಗೂ ಪುಲ್‌ ಸ್ಟಾಪ್‌ ಬಿದ್ದಿದೆ. ಇದರ ನಡುವೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಕೆಳಗಿಳಿಸಿದ ನಂತರ ಅವರಿಗೆ ನೀಡಬಹುದಾದ ಹುದ್ದೆಗಳ ಬಗ್ಗೆಯೂ ಚರ್ಚೆ ನಡೆದಿದೆ. ಸರಿಸುಮಾರು 45 ನಿಮಿಷಗಳ ಕಾಲ ಸಿದ್ದರಾಮಯ್ಯರ ಜೊತೆ ಚರ್ಚೆ ನಡೆಸಿದ ರಾಹುಲ್‌ ಗಾಂಧಿ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಮುಂದೆ ಅಧಿಕಾರ ಹಂಚಿಕೆ ಪ್ರಸ್ತಾಪ ಇಟ್ಟಿದ್ದು, ಇದರ ಜೊತೆ ಸಿದ್ದರಾಮಯ್ಯಗೆ ರಾಜ್ಯಸಭೆಯ ಆಫರ್ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಸಭೆ ಮಾತ್ರವಲ್ಲದೇ ಪುತ್ರ ಯತೀಂದ್ರ ಅವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿಯೂ ಸಹ ರಾಹುಲ್ ಗಾಂಧಿ ಆಫರ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ಸಿಎಂ ಸಿದ್ದರಾಮಯ್ಯ ಮಾತ್ರ ರಾಹುಲ್ ಗಾಂಧಿ ಆಫರ್​​ಗಳಿಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸದೆ ಸೈಲೆಂಟ್ ಆಗಿ ಬೇಸರದಲ್ಲೇ ಆಚೆ ಬಂದು ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ನಿಂತುಕೊಂಡರು.

By thebigbulletin.com - 27-05-2026


Ads in Post