Search


ಡಿಕೆ ಕಾಲ್ಗುಣ, ರಾಜ್ಯಕ್ಕೆ ಬರಗಾಲ; ಆರ್‌. ಅಶೋಕ್‌ ಆಕ್ರೋಶ..!

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಒಂದು ತಿಂಗಳಾಗಿರುವ ಕುರಿತು ಮಾತನಾಡಿರು ವಿಪಕ್ಷ ನಾಯಕ ಆರ್‌.ಅಶೋಕ್‌, ರಾಜ್ಯ ಸರ್ಕಾರವನ್ನ ತೀವ್ರವಾಗಿ ಟೀಕಿಸಿದ್ದಾರೆ. ಜೊತೆಗೆ ಡ್ಯಾಂ ನೀರನ್ನ ನಂಬಿಕೊಂಡು ಕೃಷಿ ಮಾಡಬೇಡಿ ಎಂದಿದ್ದ ಮುಖ್ಯಮುಂತ್ರಿಗಳ ಹೇಳಿಕೆಗೆ, ಆರ್‌ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್ (R Ashok) ʻಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ಬಂದು 1 ತಿಂಗಳು ಆಗಿದೆ ಆಡಳಿತದಲ್ಲಿ ಏನು ಬದಲಾವಣೆ ಆಗಿದೆ? ಅದೇ ಭ್ರಷ್ಟಾಚಾರ, ಹಳೇ ಬಾಟಲಿ ಹೊಸ ಮದ್ಯ ತರ ಆಗಿದೆ.  ಡಿಕೆ ಶಿವಕುಮಾರ್ ಅಧಿಕಾರಕ್ಕೇರಿದ ಕಾಲ್ಗಣವೊ ಏನೋ, ಅವರು ಅಧಿಕಾರಕ್ಕೆ ಬರ್ತಿದ್ದಂತೆ ರಾಜ್ಯದಲ್ಲಿ ಬರಗಾಲ ಬಂದಿದೆ. ಮುಖ್ಯಮಂತ್ರಿಗಳು ರೈತರಿಗೆ ಬೆಳೆ ಬೆಳೆಯಬೇಡಿ ಎಂದು ಹೇಳುತ್ತಿದ್ದಾರೆ, ನಿನಗೆ ಧೈರ್ಯವಿದ್ದರೆ, ಇದೇ ಮಾತನ್ನ ತಮಿಳುನಾಡಿಗೆ ಹೇಳು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. 

ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡ್ತಿದ್ದೀರಾ..!

ಮೇಕೆದಾಟು ಡ್ಯಾಂ ಕಟ್ಟೋಕೆ ಬಿಡಲ್ಲ ಅಂತಾ ತಮಿಳುನಾಡು ಸಿಎಂ ವಿಜಯ್ ಹೇಳ್ತಿದ್ದಾರೆ. ನಮ್ಮ ಸಿಎಂ ಅಧಿಕಾರಕ್ಕೆ ಬಂದು ತಿಂಗಳು ಆಯ್ತು.. ಏನಾದರೂ ಅದಕ್ಕೆ ಪ್ರತಿಯಾಗಿ ಒಂದು ನಿರ್ಣಯ ಮಾಡಿದ್ರಾ? ತಮಿಳುನಾಡಿಗೆ ಕದ್ದು ಮುಚ್ಚಿ ನೀರು ಬಿಡ್ತಿದ್ದಾರೆ. ನೀರಾವರಿ ಸಚಿವರು ಬೆಂಗಳೂರು ಬಿಟ್ಟು ಆಚೆ ಹೋಗಲ್ಲ ಎಂದಿದ್ದಾರೆ. ತುಂಗಭದ್ರಾ ಜಲಾಶಯ ಕ್ರಸ್ಟ್‌ಗೇಟ್‌ ಉದ್ಘಾಟನೆಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಬಂದಿದ್ರು. ಆದರೆ ನಮ್ಮ ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಕಾರ್ಯಕ್ರಮಕ್ಕೆ ಹೋಗೇ ಇಲ್ಲ. ರೈತರಿಗೆ ಬೆಳೆ ಬೆಳೆಯಬೇಡಿ ಎನ್ನತ್ತೀರಾ, ಆದರೆ ಆ ಬೆಲೆಗೆ ಏನ್‌ ಪರಿಹಾರ ಕೊಡ್ತೀಯಾ, ಯಾರಾದರು ಒಬ್ಬ ಮಂತ್ರಿಯಾದರು ಬರ ವೀಕ್ಷಣೆಗೆ ಹೋಗಿದ್ದೀರಾ? ಎಂದು ಅಶೋಕ್‌ ಪ್ರಶ್ನೆ ಮಾಡಿದರು.

By Ravikumar - 04-07-2026


Ads in Post