ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರು (Ramalinga Reddy) ರಾಜೀನಾಮೆ ಕುರಿತು ಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ರಾಮಲಿಂಗ ರೆಡ್ಡಿ "ನಮ್ಮ ಪಕ್ಷದ ಹಿರಿಯ ನಾಯಕರು. ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ರಾಮಲಿಂಗ ರೆಡ್ಡಿಯವರ ದಿಢೀರ್ ರಾಜೀನಾಮೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ " ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ, ಅವರು ನನ್ನ ಸಹೋದ್ಯೋಗಿ. ಪಕ್ಷದ ಹಿರಿಯ ನಾಯಕರು. ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ ಎಂದಿದ್ದಾರೆ. ಬೇರೆ ಖಾತೆ ನೀಡಬೇಕಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ಅವರ ಜೊತೆ ಚರ್ಚಿಸುತ್ತೇನೆ. ಕ್ಯಾಬಿನೆಟ್ನಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.
ಇನ್ನು ತಮ್ಮ ರಾಜೀನಾಮೆ ಬಗ್ಗೆ ರಾಮಲಿಂಗ ರೆಡ್ಡಿಯವರ ಅಚಲವಾಗಿದ್ದು " “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಒಟ್ಟಾರೆಯಾಗಿ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.