Search


ರೇಷನ್ ಕಾರ್ಡ್‌ ಇ-ಕೆವೈಸಿ ಗಡುವು ವಿಸ್ತರಣೆ: ಅಕ್ಟೋಬರ್ 20 ಹೊಸ ಡೆಡ್‌ಲೈನ್

ಬೆಂಗಳೂರು: ಕರ್ನಾಟಕದಲ್ಲಿ ರೇಷನ್ ಕಾರ್ಡ್‌ಗಳ ಇ-ಕೆವೈಸಿ (e-KYC) ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿದ್ದ ಸರ್ವರ್ ಸಮಸ್ಯೆ ಹಾಗೂ ಹೆಚ್ಚಿದ ಜನದಟ್ಟಣೆಯಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಇನ್ನೂ ಕೋಟಿಗೂ ಅಧಿಕ ಪಡಿತರ ಚೀಟಿಗಳಿಗೆ ಇ-ಕೆವೈಸಿ ಬಾಕಿ ಉಳಿದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 20, 2026ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೊಬೈಲ್ ಮೂಲಕ ಮನೆಯಲ್ಲೇ ಕುಳಿತು ಇ-ಕೆವೈಸಿ ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ತರುವ ಸಿದ್ಧತೆ ಕೂಡ ನಡೆಯುತ್ತಿದೆ ಎನ್ನಲಾಗಿದೆ.

ಇ-ಕೆವೈಸಿ ಯಾಕೆ ಕಡ್ಡಾಯ?

ಕೇಂದ್ರ ಸರ್ಕಾರದ ನಿಯಮದಂತೆ ಪಡಿತರ ಚೀಟಿದಾರರು ಪ್ರತಿ ಐದು ವರ್ಷಕ್ಕೊಮ್ಮೆ ಇ-ಕೆವೈಸಿ ಪೂರ್ಣಗೊಳಿಸಬೇಕಾಗಿದೆ. ರಾಜ್ಯದಲ್ಲಿ ಸುಮಾರು 2.67 ಕೋಟಿ ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದ್ದು, ಈ ಹಿಂದೆ ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿತ್ತು. ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಪಡಿತರ ಚೀಟಿ ರದ್ದಾಗುವ ಸಾಧ್ಯತೆ ಇದೆ.

By Ravikumar - 17-09-2026


Ads in Post