Search


2ನೇ ಬಾರಿ ಚಾಂಪಿಯನ್ ಉಭಯ ತಂಡಗಳ ಕಾಳಗ ; ಇಲ್ಲಿದೆ ಸಂಭಾವ್ಯ ತಂಡದ ಪಟ್ಟಿ..!

ಐಪಿಎಲ್ 2026 ರ ಫೈನಲ್ ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದ್ದು, ಇಂದು ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಪಂದ್ಯ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. 

ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ನಾಲ್ಕನೇ ಬಾರಿ.  ಇಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದ್ದು. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಯಾರೇ ಗೆದ್ದರೂ 2ನೇ ಬಾರಿ ಚಾಂಪಿಯನ್ ಆಗಲಿದ್ದಾರೆ.

ಆಡುವ ಬಳಗದ ಸಂಭಾವ್ಯ ಆಟಗಾರರು..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.

ಗುಜರಾತ್ ಟೈಟಾನ್ಸ್ ತಂಡ: ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಅರ್ಷದ್ ಖಾನ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಟಾಮ್ ಬ್ಯಾಂಟನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್.

By Ravikumar - 31-05-2026


Ads in Post