Search


ನೇಪಾಳದಲ್ಲಿರುವ ಭಾರತೀಯರನ್ನ ರಕ್ಷಿಸಿ; ಪ್ರಧಾನಿ ಮೋದಿಗೆ ಪಾತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿರುವ ನೇಪಾಳದಲ್ಲಿ ಹಲವು ಭಾರತೀಯರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಶೀಘ್ರವಾಗಿ ಪತ್ತೆಹಚ್ಚಿ ಸುರಕ್ಷಿತವಾಗಿ ಕರೆತರುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಸಂಪರ್ಕ ವ್ಯವಸ್ಥೆಗೂ ತೊಂದರೆಯಾಗಿದೆ. ಈ ಪರಿಸ್ಥಿತಿಯಲ್ಲಿ ಭಾರತ ಸರ್ಕಾರವು ನೇಪಾಳದೊಂದಿಗೆ ಸಮನ್ವಯ ಸಾಧಿಸಿ, ಸಂಕಷ್ಟದಲ್ಲಿರುವ ಭಾರತೀಯರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ. ನಾಪತ್ತೆಯಾಗಿರುವ ಭಾರತೀಯರ ಕುಟುಂಬಗಳು ಆತಂಕದಲ್ಲಿದ್ದು, ಅವರೊಂದಿಗೆ ಕೇಂದ್ರ ಸರ್ಕಾರ ನಿರಂತರ ಸಂಪರ್ಕದಲ್ಲಿರಬೇಕು. ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಿ, ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ವ್ಯವಸ್ಥೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಲ್ಲದೆ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ನೇಪಾಳಕ್ಕೆ ಭಾರತ ತನ್ನ ಮಾನವೀಯ ನೆರವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಖರ್ಗೆ ಹೇಳಿದ್ದಾರೆ. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಬಲೇನ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದು, ಸಂಕಷ್ಟದ ಸಂದರ್ಭದಲ್ಲಿ ನೇಪಾಳಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮಾನವೀಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಭರವಸೆ ನೀಡಿದ್ದಾರೆ.

By Ravikumar - 27-08-2026


Ads in Post