Search


ಬಸ್ ಪ್ರಯಾಣಿಕರಿಗೆ ಶಾಕ್; ಟಿಕೆಟ್ ದರ ಏರಿಕೆ ಅನಿವಾರ್ಯ ಎಂದ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹5 ಹೆಚ್ಚಿಸಲು ಸರ್ಕಾರ ಸಮ್ಮತಿ ನೀಡಿರುವ ಬೆನ್ನಲ್ಲೇ, ಇದೀಗ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವಿಧಾನಪರಿಷತ್‌ನಲ್ಲಿ ಗುರುವಾರ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್, ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಬರ ಪರಿಸ್ಥಿತಿ ಕುರಿತು ನಡೆದ ಚರ್ಚೆ ವೇಳೆ ಹಾಲಿನ ದರ ಏರಿಕೆ ಪ್ರಸ್ತಾಪವಾದ ಸಂದರ್ಭದಲ್ಲಿ ಸಚಿವರು ಈ ವಿಚಾರವನ್ನು ಪ್ರಸ್ತಾಪಿಸಿದರು.

ಡೀಸೆಲ್ ದರ ನಾಲ್ಕು ಬಾರಿ ಏರಿಕೆಯಾಗಿದ್ದರೂ, ವಿರೋಧ ಪಕ್ಷಗಳ ವಿರೋಧದ ಹಿನ್ನೆಲೆಯಲ್ಲಿ ಈವರೆಗೆ ಬಸ್ ದರ ಹೆಚ್ಚಳ ಮಾಡಿರಲಿಲ್ಲ. ಆದರೆ, ಇದೀಗ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ. ರಾಜ್ಯದ ಸಾರಿಗೆ ನಿಗಮಗಳು ಸುಮಾರು ₹8,000 ಕೋಟಿ ನಷ್ಟದಲ್ಲಿದ್ದು, ಸಿಬ್ಬಂದಿಗೆ ವೇತನ ನೀಡುವುದೇ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ. ನಿಗಮಗಳ ನಷ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ನೇಮಕಾತಿ ಪ್ರಕ್ರಿಯೆಗಳಿಗೂ ತೊಡಕು ಉಂಟಾಗಿದೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.

By Ravikumar - 25-09-2026


Ads in Post