ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ಅವರು ತಮ್ಮ 88 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರೂ ಇಂದು ಸಂಜೆ 7:30ಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಂದಿದೆ.
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು. 1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ. ಚಲಪತಿ ರಾವ್ ಅವರ ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಜಾನಕಿ ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂ.ಎಲ್.ಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದು ಎಂದು ಹರಿದು ಬರಲು ಪ್ರಾರಂಭವಾದವು. ಮಲಯಾಳಂ ಚಿತ್ರಗಳಲ್ಲಿ ಕೂಡಾ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ತೆಲುಗು,ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.
ಎಸ್. ಜಾನಕಿ ಅವರ ಅಂತ್ಯಸಂಸ್ಕಾರವನ್ನು ಭಾನುವಾರ ಸಂಜೆ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಜಾನಕಿ ಅವರ ಕುಟುಂಬಸ್ಥರೊಂದಿಗೆ ಚರ್ಚೆಯ ನಂತರ, ಎಸ್.ಜಾನಕಿ (S. Janaki) ಅಂತ್ಯಸಂಸ್ಕಾರದ ಸ್ಥಳ ಹಾಗೂ ಸಮಯವನ್ನು ಜಿಲ್ಲಾಡಳಿತ ಅಧಿಕೃತವಾಗಿ ಪ್ರಕಟಿಸಿದೆ. ಎಸ್.ಜಾನಕಿ ಅವರ ಕೊನೆಯ ಇಚ್ಛೆಯಂತೆಯೇ ಮೈಸೂರಿನಲ್ಲಿಯೇ ಅವರ ಅಂತ್ಯಕ್ರಿಯೆ (funeral) ನಡೆಸಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಈ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ