ನವದೆಹಲಿ : ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ದ ಸಲ್ಲಿಕೆಯಾಗಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಚುನಾವಣಾ ಆಯೋಗದ ವಿರುದ್ದ ಆರೋಪ ಮಾಡುತ್ತಿದ್ದ ವಿಪಕ್ಷಗಳಿಗೆ ಮುಖಭಂಗವಾಗಿದೆ.
ಮೂಡಿಸಿದೆ. ಬಿಹಾರದಲ್ಲಿ ಭಾರತೀಯ ಚುನಾವಣಾ ಆಯೋಗ ನಡೆಸಿದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ಸಂಪೂರ್ಣವಾಗಿ ಸಾಂವಿಧಾನಿಕ ಮತ್ತು ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷ ಪರಿಷ್ಕರಣೆ ನಡೆಸುವ ಸಂಪೂರ್ಣ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ತೀರ್ಪನ್ನು ಪ್ರಕಟಿಸಿದೆ.
ವಿಶೇಷ ಪರಿಷ್ಕರಣೆ ಕಾನೂನು ಬಾಹಿರವಲ್ಲ..!
ಇನ್ನು ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐರರ ಪ್ರಕ್ರಿಯೆ ನಿಯಮಿತವಾಗಿ ನಡೆಯುವ ಸಾಮಾನ್ಯ ಪ್ರಕ್ರಿಯೆಗಿಂತ ಭಿನ್ನವಾಗಿದೆ ಎಂಬ ಮಾತ್ರಕ್ಕೆ ಇಡೀ ಪರಿಷ್ಕರಣೆಯನ್ನ ಕಾನೂನುಬಾಹಿರ ಎಂದು ಘೋಷಿಸಲು ಸಾಧ್ಯವಿಲ್ಲ ಎಂದಿರುವ ನ್ಯಾಯಾಲಯ. ಆಯೋಗವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿಲ್ಲ ಎಂದು ಸ್ಪಷ್ಟಪಡಿಸಿದೆ. ಜೊತೆಗೆ ಸಂವಿಧಾನದ 324 ನೇ ವಿಧಿ ಮತ್ತು 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಇಂತಹ ವಿಶೇಷ ಪರಿಷ್ಕರಣೆ ನಡೆಸುವ ಪೂರ್ಣ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ.
ಈ ವಿಶೇಷ ಪರಿಷ್ಕರಣೆಯ (SIR) ಭಾಗವಾಗಿ, ಬಿಹಾರದ ಕರಡು ಮತದಾರರ ಪಟ್ಟಿಯಿಂದ ಸುಮಾರು 65 ಲಕ್ಷ ನಕಲಿ ಅಥವಾ ಅಸಿಂಧು ಹೆಸರುಗಳನ್ನು ಚುನಾವಣಾ ಆಯೋಗವು ತೆಗೆದುಹಾಕಿತ್ತು. ಅಧಿಸೂಚನೆಯ ಪ್ರಕಾರ, 2002 ಅಥವಾ 2003 ರ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಮತದಾರರು, ಆ ಪಟ್ಟಿಯಲ್ಲಿರುವ ವ್ಯಕ್ತಿಗಳೊಂದಿಗೆ ತಮ್ಮ ಪೂರ್ವಜರ ಸಂಪರ್ಕವನ್ನು ಸಾಬೀತುಪಡಿಸಬೇಕಾಗಿತ್ತು. ಇದನ್ನ ಪ್ರಶ್ನಿಸಿಕೊಂಡು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.