Search


ರಾಜ್ಯದಲ್ಲಿ ಇಂದಿನಿಂದ SIR ಆರಂಭ; ಈ ದಾಖಲೆಗಳನ್ನ ತೆಗೆದಿಟ್ಟುಕೊಂಡಿರಿ..!

ಬೆಂಗಳೂರು : ದೇಶಾದ್ಯಂತ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತಪಟ್ಟಿ ಪರಿಷ್ಕರಣೆ ಪ್ರಕ್ರಿಯೆ (SIR) ಇಂದಿನಿಂದ ರಾಜ್ಯದಲ್ಲಿ ಆರಂಭವಾಗಲಿದೆ. ಚುನಾವಣಾ ಅಧಿಕಾರಿಗಳು ಮತ್ತು ಬಿಎಲ್‌ಓಗಳು ಇಂದಿನಿಂದ ಮನೆ ಮನೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಈ ಸಮಯದಲ್ಲಿ ಮತದಾರರು ಕಡ್ಡಾಯವಾಗಿ ಈ ದಾಖಲೆಗಳನ್ನ ಇಟ್ಟುಕೊಂಡಿರಬೇಕು ಎಂದು ಪರಿಶೀಲನೆ ನಡೆಸಲಾಗಿದೆ.

ದೇಶದ್ಯಾಂತ ಈಗಾಗಲೇ ಅನೇಕ ರಾಜ್ಯದಲ್ಲಿ ಚುನಾವಣ ಆಯೋಗ (Election Commission of India) ತೀವ್ರ ಮತಪಟ್ಟಿ ಪರಿಷ್ಕರಣೆಯನ್ನ ಯಶಸ್ವಿಯಾಗಿ ನಡೆಸಿದೆ. 3ನೇ ಹಂತದಲ್ಲಿ ಕರ್ನಾಟಕ ಸೇರಿದಂತೆ ಅನೇಕ ರಾಜ್ಯದಲ್ಲಿ ಈ ಪ್ರಕ್ರಿಯೆ ಆರಂಭವಾಗಿದೆ.
ಇನ್ನು ಕರ್ನಾಟಕದಲ್ಲಿ (Karnataka) 91.61% ಮ್ಯಾಪಿಂಗ್ ಆಗಿದ್ದು, 5,54,32,314 ಮತದಾರರ ಪೈಕಿ 5,07,79,810 ಮತದಾರರ ಮ್ಯಾಪಿಂಗ್ ನಡೆದಿದೆ. 46,52,504 ಮತದಾರರು ಮ್ಯಾಪಿಂಗ್ ಆಗಬೇಕಿದೆ. ಈ 5.55 ಕೋಟಿ ಮತದಾರರ ಪೈಕಿ ಅಸಲಿ ಯಾರು? ನಕಲಿ ಯಾರು? ಎನ್ನುವುದನ್ನು ಪರಿಶೀಲಿಸಲಾಗುತ್ತದೆ.

ನಕಲಿ, ಅನರ್ಹ ಮತದಾರರನ್ನು ಚುನಾವಣಾ ಆಯೋಗ ಜರಡಿ ಹಿಡಿದು ಪಟ್ಟಿಯಿಂದ ಡಿಲೀಟ್ ಮಾಡಲಿದೆ. ಮತದಾರರು ಅರ್ಜಿಯನ್ನ ತುಂಬಿ ಅರ್ಜಿಗೆ ಸಹಿ ಮಾಡಿ ಕೆಲವು ದಾಖಲೆಗಳನ್ನು ಸಲ್ಲಿಕೆ ಮಾಡಬೇಕಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಹೆಸರು ಸೇರ್ಪಡೆ ಮೃತಪಟ್ಟವರು, ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಿದ್ದಾರೆ.

ಬಿಎಲ್‌ಓಗಳು ಮನೆಗೆ ಭೇಟಿ ನೀಡಿ ಎಸ್‌ಐಆರ್ ಅರ್ಜಿ ನೀಡಲಿದ್ದಾರೆ. ಎಸ್‌ಐಆರ್ ಅರ್ಜಿಗೆ ಮಾಹಿತಿ ನೀಡಿ ಮತದಾರರು ಸಹಿ ಮಾಡಬೇಕು. ಎಸ್‌ಐಆರ್‌ನಲ್ಲಿ ಭಾಗಿಯಾಗಿ ಮಾಹಿತಿ ನೀಡಿದರೆ ಮಾತ್ರ ಮತದಾನದ ಹಕ್ಕು, ಇಲ್ಲದೇ ಹೋದರೆ ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ. ಅಕ್ಟೋಬರ್ 7, 2026ಕ್ಕೆ 18 ತುಂಬುವ ಯುವ ಮತದಾರರು ಅರ್ಜಿ ಹಾಕಬಹುದಾಗಿದೆ. ರಾಜ್ಯ ಚುನಾವಣಾ ಆಯೋಗ, ಜಿಬಿಎ ಹಾಗೂ ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. 

ಇನ್ನು ಚುನಾವಣಾ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಮತದಾರರು ಕಡ್ಡಾಯವಾಗಿ ಇಟ್ಟುಕೊಳ್ಳಬೇಕಾದ ದಾಖಲೆಗಳನ್ನ ಈ ಕೆಳಗೆ ಪಟ್ಟಿಮಾಡಲಾಗಿದೆ.

1. ಕುಟುಂಬದವರ ಗುರುತಿನ ಚೀಟಿ
2. ವೋಟರ್ ಐಡಿ
3. ಆಧಾರ್ ಕಾರ್ಡ್
4. ವಿಳಾಸ ದೃಢಿಕರಣ ಪತ್ರ
5. ಪಾಸ್‌ಪೋರ್ಟ್ ಸೈಜ್ ಫೋಟೋ

By Ravikumar - 30-06-2026


Ads in Post