Search


ದೇಶದ ಭವಿಷ್ಯಕ್ಕಿಂತ ಸ್ಕಿನ್‌ ಹೆಚ್ಚು ಬ್ರೈಟ್; ಮೋದಿಗೆ ಟಾಂಗ್ ಕೊಟ್ಟ ದೀಪ್ಕೆ

ನವದೆಹಲಿ: ಪೇಪರ್‌ ಲೀಕ್‌ ಹಾಗೂ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡಿರುವ ಇನ್‌ಸ್ಟಾಗ್ರಾಂ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ತರಲಾಗಿರುವ Public Examinations (Prevention of Unfair Means) ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿಡಿಯೋ ಹಂಚಿಕೊಂಡಿದ್ದರು. ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಮತ್ತು ಪರೀಕ್ಷಾ ಅಕ್ರಮಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಇದರ ಉದ್ದೇಶ ಎಂದು ಅವರು ಹೇಳಿದ್ದಾರೆ

ಮೋದಿಯ ಈ ವಿಡಿಯೋಗೆ CJP ನಾಯಕ ಅಬಿಜೀತ್ ದೀಪ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ಅವರ ವಿಡಿಯೋವನ್ನು ಉಲ್ಲೇಖಿಸಿ, ದೇಶದ ಭವಿಷ್ಯಕ್ಕಿಂತ ಅವರ ಸ್ಕಿನ್‌ ಹೆಚ್ಚು ಬ್ರೈಟ್‌ ಆಗಿದೆ ಎಂಬ ರೀತಿಯಲ್ಲಿ ಟೀಕೆ ಮಾಡಿದ್ದಾರೆ. ದೀಪ್ಕೆ ಅವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಕೆಲವರು ಅವರ ಟೀಕೆಯನ್ನು ಬೆಂಬಲಿಸಿದರೆ, ಇನ್ನು ಕೆಲವರು ಪ್ರಧಾನಿ ಅವರ ನೀತಿ ಹಾಗೂ ಸರ್ಕಾರದ ಕ್ರಮಗಳ ಬಗ್ಗೆ ಮಾತನಾಡುವ ಬದಲು ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಪೇಪರ್‌ ಲೀಕ್‌ ಮತ್ತು ಪರೀಕ್ಷಾ ಅಕ್ರಮಗಳ ವಿಚಾರ ದೇಶಾದ್ಯಂತ ದೊಡ್ಡ ಚರ್ಚೆಯಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಜನರ ಭವಿಷ್ಯಕ್ಕೆ ಸಂಬಂಧಿಸಿದ ಈ ವಿಚಾರದಲ್ಲಿ ಸರ್ಕಾರ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರ ವಿಡಿಯೋ ಹಾಗೂ ಅದಕ್ಕೆ ದೀಪ್ಕೆ ನೀಡಿರುವ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಚರ್ಚೆಗೆ ಮತ್ತಷ್ಟು ವೇಗ ನೀಡಿದೆ

By Ravikumar - 31-07-2026


Ads in Post