ಬೆಂಗಳೂರು: ರಾಜ್ಯ ಸರ್ಕಾರ ಸೆಪ್ಟಂಬರ್ 21ರಿಂದ ವಿಶೇಷ ಅಧಿವೇಶನವನ್ನ ಕರೆಯಲು ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದ್ದು, 3 ದಿನಗಳ ವಿಶೇಷ ಅಧಿವೇಶನ ಕರೆಯುವುದು ಬಹುತೇಕ ಖಚಿತವಾಗಿದೆ. ಈ ಅಧಿವೇಶನದಲ್ಲಿ ರಾಜ್ಯದಲ್ಲಿ ಆವರಿಸಿರುವ ಬರ ಮತ್ತು ಕಸ್ತೂರಿ ರಂಗನ್ ವರದಿ ಜಾರಿಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ವಿಶ್ಲೇಷಿಸಿದ್ದಾರೆ.
ಕಳೆದ ಆಗಸ್ಟ್‌ನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ್ದರು, ಇದರಿಂದಾಗಿ ಮುಂಗಾರು ಅಧಿವೇಶನದಲ್ಲಿ ಯಾವುದೇ ವಿಷಯದ ಕುರಿತು ವಿಸೃತ ಚರ್ಚೆಯಾಗಲಿಲ್ಲ. ಇದೀಗ ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಸೆಪ್ಟಂಬರ್ 21ರಿಂದ ಸೆಪ್ಟಂಬರ್ 23ರವರೆಗೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲು ಅನುಮೋದಿಸಲಾಗಿದೆ.