ತೆಲುಗಿನ ಪ್ರತಿಭಾನ್ವಿತ ನಟ ರಾಮ್ ಪೋತಿನೇನಿ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನ್ಮದಿನದ ಪ್ರಯುಕ್ತ ರಾಮ್ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಬಾರಿ ರಾಮ್ ಪೋತಿನೇನಿ ನಟನೆ ಜೊತೆಗೆ ನಿರ್ದೇಶನಕ್ಕೆ ಇಳಿದಿದ್ದಾರೆ.
ಡೈರೆಕ್ಟರ್ ಕುರ್ಚಿ ಅಲಂಕರಿಸಿದ ರಾಮ್ ಪೋತಿನೇನಿ!
ಎನರ್ಜೆಟಿಕ್ ಸ್ಟಾರ್ ರಾಮ್ ಪೋತಿನೇನಿ, ʻಆಂಧ್ರ ಕಿಂಗ್ ತಾಲೂಕಾʼ ಸಿನಿಮಾಗೆ ಸಾಹಿತ್ಯ ಬರೆದು ಸೈ ಎನಿಸಿಕೊಂಡಿದ್ದರು. ಇದೀಗ ಅವರು ಮತ್ತೊಂದು ಹೆಜ್ಜೆ ಮುಂದೆ ಇಟ್ಟು ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಹೌದು.. ತಮ್ಮ 23ನೇ ಸಿನಿಮಾಗೆ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದು, ಅವರ ಬರ್ತಡೇ ಪ್ರಯುಕ್ತ ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ವೀರ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸುತ್ತಿದ್ದು, ಜಾಕೆಟ್ ಧರಿಸಿ ವಿ ಕಟ್ ಹೇರ್ ಸ್ಟೈಲ್ ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಆದರೆ ಮುಖ ರಿವೀಲ್ ಮಾಡದೆ ಕುತೂಹಲ ಹೆಚ್ಚಿಸಿದ್ದಾರೆ.
ಈ ಸಿನಿಮಾಗೆ ʻRAMO23ʼ ಎಂಬ ತಾತ್ಕಾಲಿಕ ಶೀರ್ಷಿಕೆ ಇಡಲಾಗಿದೆ. ಜೂನ್ನಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು, ಡಿಸೆಂಬರ್ನಲ್ಲಿ ಸಿನಿಮಾ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ. ಅಂದಹಾಗೆ, ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾವಾಗಿದ್ದು, ತಮ್ಮದೇ ʻರಾಪೋ ಸಿನಿಮ್ಯಾಟಿಕ್ಸ್ʼ ನಿರ್ಮಾಣ ಮಾಡುತ್ತಿದ್ದಾರೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ರಾಮ್ ಪೋತಿನೇನಿ ರಿವೀಲ್ ಮಾಡಲಿದ್ದಾರೆ.