Search


ವಿದ್ಯಾರ್ಥಿಯೊಂದಿಗೆ ಶಿಕ್ಷಕಿ ಲೈಂಗಿಕ ಸಂಬಂಧ; 7 ವರ್ಷ ಕಾರಾಗೃಹ ಶಿಕ್ಷೆ

ವಾಷಿಂಗ್ಟನ್: ಅಮೆರಿಕದಲ್ಲಿ 17 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 37 ವರ್ಷದ ಶಿಕ್ಷಕಿಗೆ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಫ್ಲೋರಿಡಾದ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆ, ಅದೇ ಶಾಲೆಯ 17 ವರ್ಷದ ವಿದ್ಯಾರ್ಥಿಯೊಂದಿಗೆ ಎರಡು ಬಾರಿ ಲೈಂಗಿಕ ಸಂಪರ್ಕ ಹೊಂದಿದ್ದರು ಎಂದು ಪ್ರಕರಣದಲ್ಲಿ ಆರೋಪಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಶಿಕ್ಷಕಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ಆರೋಪಿಯನ್ನು ಏಪ್ರಿಲ್ 29ರಂದು ಬಂಧಿಸಲಾಗಿತ್ತು. ಇದೀಗ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆಯ ಜೊತೆಗೆ 15 ವರ್ಷಗಳ ಪ್ರೊಬೇಷನ್ ಶಿಕ್ಷೆಯನ್ನೂ ವಿಧಿಸಿದೆ. ಪ್ರಕರಣದ ಬಳಿಕ ಶಿಕ್ಷಕಿಯನ್ನು ಶಾಲಾ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಅಮೆರಿಕದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಅಕ್ರಮ ಲೈಂಗಿಕ ಸಂಬಂಧಗಳ ಪ್ರಕರಣಗಳು ಕಳವಳಕ್ಕೆ ಕಾರಣವಾಗಿವೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, 2014ರಿಂದ 2019ರ ಅವಧಿಯಲ್ಲಿ 500ಕ್ಕೂ ಹೆಚ್ಚು ಶಿಕ್ಷಕರು ಇಂತಹ ಪ್ರಕರಣಗಳಲ್ಲಿ ಸಿಲುಕಿದ್ದಾರೆ. 2023ರಲ್ಲಿ ಮಕ್ಕಳ ಲೈಂಗಿಕತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಮಾರು 350 ಶಿಕ್ಷಕರನ್ನು ಬಂಧಿಸಲಾಗಿದೆ.

By Ravikumar - 31-08-2026


Ads in Post