Search


ಮಹಾರಾಷ್ಟ್ರದಲ್ಲಿ TET ಪರೀಕ್ಷೆಯ ಪ್ರಶ್ನೆಪತ್ರಿಕೆ ಲೀಕ್‌; ಆಕಾಂಕ್ಷಿಗಳಲ್ಲಿ ಆತಂಕ

ಮುಂಬೈ: ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ಮಹರಾಷ್ಟ್ರದಲ್ಲಿ (Maharashtra) ಮತ್ತೊಂದು ಪ್ರಶ್ನೆ ಪತ್ರಿಕೆ ಲೀಕ್‌ ಆಗಿದೆ, ನಾಳೆ ನಡೆಯಬೇಕಿದ್ದ ಶಿಕ್ಷಕರ ಅರ್ಹತ (TET)ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನ ರದ್ದುಗೊಳಿಸಿ ಫಡ್ನವೀಸ್‌ ಸರ್ಕಾರ ಆದೇಶ ಹೊರಡಿಸಿದೆ. 

ನಾಳೆ ಮಹಾರಾಷ್ಟ್ರದಾದ್ಯಂತ ಶಿಕ್ಷಕರ ಆರ್ಹತ ಪರೀಕ್ಷೆ ನಡೆಯಬೇಕಿತ್ತು , ಆದರೆ ವ್ಯಕ್ತಿಯೊಬ್ಬನ ಬಳಿ, ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇದೆ ಎಂಬ ಮಾಹಿತಿ ಮೇರೆಗೆ ಮಹಾರಾಷ್ಟ್ರ ಪೊಲೀಸರು ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷೆಯನ್ನ ರದ್ದುಗೊಳಿಸಿದ್ದಾರೆ. ಪರೀಕ್ಷೆಯ ಪಾರದರ್ಶಕತೆ ಮತ್ತು ಸಮಗ್ರತೆಯನ್ನ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿ ತಿಳಿಸಿದೆ.

ಈ ಸಂಬಂಧ ಭಿವಾಂಡಿಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದೂಡಲಾದ ಟಿಇಟಿ ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ https://mahatet.in/ನಲ್ಲಿ ಪ್ರಕಟವಾದ ನಂತರ ವೀಕ್ಷಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಮಹಾರಾಷ್ಟ್ರ ಟಿಇಟಿ ಪರೀಕ್ಷಾ ವಿಧಾನ

ಮಹಾರಾಷ್ಟ್ರ ಟಿಇಟಿ 2026 ಪರೀಕ್ಷೆಯು ಪೇಪರ್ 1 ಮತ್ತು ಪೇಪರ್ 2 ಎಂಬ ಎರಡು ಪತ್ರಿಕೆಗಳನ್ನು ಒಳಗೊಂಡಿದೆ. ಎರಡೂ ಪರೀಕ್ಷೆಗಳು ಒಂದೇ ದಿನ ಬೇರೆ ಬೇರೆ ಸಮಯದಲ್ಲಿ ನಡೆಯುತ್ತವೆ. ಮೊದಲ ಪತ್ರಿಕೆಯು ಬೆಳಗ್ಗೆ 10:30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತ್ತು ಎರಡನೇ ಪತ್ರಿಕೆಯು ಮಧ್ಯಾಹ್ನ :30 ರಿಂದ ಸಂಜೆ 5 ಗಂಟೆಯವರೆಗೆ ನಡೆಯುತ್ತದೆ. ಈ ಪರೀಕ್ಷೆಯು ಆಫ್‌ಲೈನ್ ಮಾದರಿಯಲ್ಲಿ ನಡೆಯಲಿದ್ದು, ಒಎಂಆರ್ ಶೀಟ್‌ನಲ್ಲಿ ಉತ್ತರಗಳನ್ನು ಗುರುತಿಸಬೇಕಿರುತ್ತದೆ. ಪರೀಕ್ಷೆಯಲ್ಲಿ ತಲಾ ಒಂದು ಅಂಕದ 150 ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆಯಲ್ಲಿ ಯಾವುದೇ ನೆಗೆಟಿವ್ ಮಾರ್ಕಿಂಗ್ ಇರುವುದಿಲ್ಲ

By Ravikumar - 27-06-2026


Ads in Post