ಚೆನ್ನೈ: ಬಿಜೆಪಿಗೆ ರಾಜೀನಾಮೆ ನೀಡಿ ತಮಿಳು ನೆಲದಲ್ಲಿ ಹೊಸ ಜನೋಂದಲನ ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈಗೆ ತಮಿಳುನಾಡಿನಲ್ಲಿ(Tamil Nadu) ಅಭೂತಪೂರ್ವ ಜನ ಬೆಂಬಲ ದೊರಕಿದೆ. ಜೂನ್ 5 ರ ಶುಕ್ರವಾರದಂದು ಬಿಜೆಪಿಗೆ ಸೌಹಾರ್ದಯುತವಾಗಿ ರಾಜೀನಾಮೆ ನೀಡಿದ ಕೇವಲ 24 ಗಂಟೆಗಳ ಅವಧಿಯಲ್ಲಿ, ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ರಾಜಕೀಯ ಆಂದೋಲನಕ್ಕೆ ಬರೋಬ್ಬರಿ 14 ಲಕ್ಷ ನಾಗರಿಕರು ಸಕ್ರಿಯ ಸದಸ್ಯರಾಗಿ ಸೇರ್ಪಡೆಗೊಳ್ಳುವ ಮೂಲಕ ಭರ್ಜರಿ ಮುನ್ನುಡಿ ಬರೆದಿದ್ದಾರೆ.
ಅಣ್ಣಾಮಲೈ ಅವರ ಕರೆಗೆ ಸಿಕ್ಕ ಅಭೂತಪೂರ್ವ ಸ್ಪಂದನೆಯಿಂದಾಗಿ ಅವರ ಆಂದೋಲನದ ಅಧಿಕೃತ ವೆಬ್ಸೈಟ್ನಲ್ಲಿ ಕೇವಲ ಒಂದು ದಿನದಲ್ಲಿ 14 ಲಕ್ಷಕ್ಕೂ ಹೆಚ್ಚು ಜನ ನೋಂದಾಯಿಸಿಕೊಂಡಿದ್ದಾರೆ. ಸ್ವಯಂಸೇವಕರೇ ನಮ್ಮ ಜೀವಾಳ. ಶಿಕ್ಷಣ, ಆರೋಗ್ಯ, ಪರಿಸರ ಮತ್ತು ಯುವ ನಾಯಕತ್ವದ ಮೂಲಕ ತಳಮಟ್ಟದಲ್ಲಿ ನಿಜವಾದ ಬದಲಾವಣೆ ತರುವುದು ನಮ್ಮ ಗುರಿ ಎಂದು ವೆಬ್ಸೈಟ್ ಸಂದೇಶ ಸಾರಿದೆ. ಯುವಕರು ಮತ್ತು ಸಾಮಾನ್ಯ ನಾಗರಿಕರು ಸ್ವಯಂಪ್ರೇರಿತವಾಗಿ ಹರಿದುಬರುತ್ತಿರುವುದು ದಕ್ಷಿಣ ಭಾರತದ ರಾಜಕಾರಣದಲ್ಲಿ ಹೊಸ ಪ್ರಜಾಪ್ರಭುತ್ವದ ಅಲೆಯ ಸಂಕೇತವಾಗಿ ಹೊರಹೊಮ್ಮಿದೆ.
ಬಿಜೆಪಿಗೆ ರಾಜೀನಾಮೆ ನೀಡ್ತಿರುವ ನಾಯಕರು...!
ಅಣ್ಣಾಮಲೈ ರಾಜೀನಾಮೆ ಬೆನ್ನಲ್ಲೇ, ಬಿಜೆಪಿಯ ಇತರ ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು. ಇದರಿಂದಾಗಿ ಕಂಗಾಲಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ತೀವ್ರ ಅಸಮಧಾನ ಹೊರ ಹಾಕಿದ್ದಾರೆ. ಅಣ್ಣಾಮಲೈ ಬಿಜೆಪಿಯ ಕೆಲವು ಸದಸ್ಯರಿಗೆ ಬ್ರೈನ್ ವಾಶ್ ಮಾಡಿ ರಾಜೀನಾಮೆ ಕೊಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಈ ಕುರಿತು ಮಾಜಿ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟೀಕರಣ ನೀಡಿದ್ದು, " ನಾನು ರಾಜೀನಾಮೆ ನೀಡಿದ ನಂತರ, ಬೇರೆವರಿಗೆ ರಾಜೀನಾಮೆ ನೀಡಿ ನನ್ನ ಜೊತೆ ಬನ್ನಿ ಎಂದು ಒತ್ತಡ ಹಾಕಿಲ್ಲ, ಎಂದು ನೈನಾರ್ ನಾಗೇಂದ್ರನ್ ಆರೋಪವನ್ನ ಅಣ್ಣಾಮಲೈ ನಿರಾಕರಿಸಿದ್ದಾರೆ