Search


ತೀರ್ಪು ಪ್ರಕಟವಾಗುವುದಕ್ಕೆ ಮುನ್ನವೇ ಬಾಂಬ್‌ ಸ್ಪೋಟ ಪ್ರಕರಣದ ಶಂಕಿತ ಉಗ್ರ ಸಾ*ವು..!

ಬೆಂಗಳೂರು: 2008ರ ಮಡಿವಾಳ ಬಾಂಬ್‌ ಸ್ಪೋಟ ಪ್ರಕರಣದ (Madiwala bomb blast case) ಶಂಕಿತ ಉಗ್ರ ಅಬ್ದುಲ್‌ ಖಾದರ್‌ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಬಾಂಬ್‌ ಇಟ್ಟು ಸ್ಪೋಟಕ್ಕೆ ಸಂಚು ರೂಪಿಸಿದ್ದ ಈತನನ್ನ ಎನ್‌ಐಟ ಬಂಧಿಸಿ ಜೈಲಿಗಟ್ಟಿತ್ತು. ಈ ಪ್ರಕರಣದ ತೀರ್ಪು ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಬೇಕಿತ್ತು. ಆದರೆ ತೀರ್ಪು ಬರುವ ಮುನ್ನವೇ ಅಬ್ದುಲ್‌ ಖಾದರ್‌ ಮೃತಪಟ್ಟಿದ್ದಾನೆ.

2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ((Parappana Agrahara Central Jail) ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಇಂದು (ಜೂನ್ 12) ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅಬ್ದುಲ್​ನನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದ್ರೆ, ಮಾರ್ಗಮಧ್ಯೆ ಹೃದಯಾಘಾತದಿಂದ ಅಬ್ದುಲ್ ಖಾದರ್ ಮೃತಪಟ್ಟಿದ್ದಾನೆ.

ಅಬ್ದುಲ್ ಖಾದರ್​​​ ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ತಕ್ಷಣ ಜೈಲು ಅಧಿಕಾರಿಗಳು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಬ್ದುಲ್ ಖಾದರ್ ವಿರುದ್ಧದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಅಂತಿಮ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇತ್ತು. ಆದರೆ ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಅಬ್ದುಲ್ ಖಾದರ್ ಕೊನೆಯುಸಿರೆಳೆದಿದ್ದಾನೆ. ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಯಾಗಿದ್ದ ಅಬ್ದುಲ್ ಖಾದರ್, 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಅಬ್ದುಲ್ ಖಾದರ್ ನನ್ನು ಬಂಧಿಸಿತ್ತು.
 

By Ravikumar - 13-06-2026


Ads in Post