Search


ಅಮೆರಿಕ-ಇರಾನ್ ಶಾಂತಿ ಒಪ್ಪಂದ ಈಗ ಸಂಪೂರ್ಣ . ಒಂದು ಪ್ರಶ್ನೆ ಯಾರು ಯಾರು ಸೋಲು ಯಾರ ಗೆಲವು

ಈ ಒಪ್ಪಂದದಿಂದ ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಕುರಿತು ತಮ್ಮ ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದು, "ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು" ಎಂದು ಘೋಷಿಸಿದ್ದಾರೆ.

ಅಮೆರಿಕ-ಇರಾನ್ ನಡುವಣ 107 ದಿನಗಳ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ಜೂನ್ 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ.

ಈ ಒಪ್ಪಂದದಿಂದ ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಕುರಿತು ತಮ್ಮ ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದು, "ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು" ಎಂದು ಘೋಷಿಸಿದ್ದಾರೆ.

ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲು ಮತ್ತು ಇರಾನ್ ಬಂದರುಗಳ ಮೇಲಿನ ಅಮೆರಿಕ ನೌಕಾ ದಿಗ್ಬಂಧನ ಕೊನೆಗೊಳಿಸಲು ಈ ಒಪ್ಪಂದ ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಆರಂಭದಲ್ಲಿ ಜಲಮಾರ್ಗವನ್ನು ಮತ್ತೆ ತೆರೆಯಲು ಮತ್ತು ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತಿರುವುದಾಗಿ ಟ್ರಂಪ್ ಮೊದಲಿಗೆ ಹೇಳಿದ್ದರು.

"ಹಾರ್ಮುಜ್ ಜಲಸಂಧಿಯನ್ನು ಟೋಲ್-ಫ್ರೀ ಆಗಿ ತೆರೆಯಲು ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ. ಇದೇ ವೇಳೆ ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್‌ಗಳನ್ನು ಪ್ರಾರಂಭಿಸಿ. ತೈಲ ಹರಿಯಲು ಬಿಡಿ!" ಎಂದು ಅವರು ಬರೆದುಕೊಂಡಿದ್ದಾರೆ.

ಆದಾಗ್ಯೂ ನಂತರದ ಮತ್ತೊಂದು ಪೋಸ್ಟ್‌ನಲ್ಲಿ, ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಿದ ನಂತರ ಶುಕ್ರವಾರ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲಾಗುವುದು ಎಂದು ಅಮೆರಿಕ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಅವರ 80 ನೇ ಹುಟ್ಟುಹಬ್ಬದಂದು ಈ ಘೋಷಣೆ ಮಾಡಿದ್ದು, ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಒಂದು ವಾರದ ತೀವ್ರ ರಾಜತಾಂತ್ರಿಕ ಬಳಿಕ ಈ ಬೆಳವಣಿಗೆಯಾಗಿದೆ. ಈ ಒಪ್ಪಂದವನ್ನು ಮಹಾನ್ ಸಾಧನೆ ಎಂದು ಟ್ರಂಪ್ ಹೇಳಿದ್ದು, ಇದರಿಂದ ಮಧ್ಯ ಪ್ರಾಚ್ಯದಲ್ಲಿ ಪರಿಸ್ಥಿತಿ ಶಾಂತಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

By thebigbulletin.com - 15-06-2026


Ads in Post