ನವದೆಹಲಿ: ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ಪ್ರತಿಭಟನೆ ಶನಿವಾರ ಸಂಜೆ ಮುಕ್ತಾಯಗೊಂಡಿತು. ಶಾಂತಿಯುತವಾಗಿ ನಡೆದ ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಸೇರಿದಂತೆ ಹಲವರು ಭಾಗವಹಿಸಿದ್ದು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅಭಿಜೀತ್ ದೀಪ್ಕೆ(Abhijeet Dipke ) ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಆಗಿತ್ತು, ಮುಂದಿನ ದಿನಗಳಲ್ಲಿ ಇನ್ನು ದೊಡ್ಡ ಹೋರಾಟ ಮಾಡುವುದಾಗಿ ಘೋಷಿಸಿದ್ದಾರೆ.
ಅಭಿಜೀತ್ ದಿಪ್ಕೆ ಹೇಳಿದೇನು?
CJP ಪ್ರತಿಭಟನೆ ಬಳಿಕ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಅವರು ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದು, ನನ್ನ ಪೋಷಕರನ್ನು ಭೇಟಿ ಮಾಡಲು ಮನೆಗೆ ಹೋಗುತ್ತಿದ್ದೇನೆ. ನಾನು ಅವರನ್ನು ಕೊನೆಯದಾಗಿ ಭೇಟಿಯಾಗಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಕಳೆದ 15 ದಿನಗಳಲ್ಲಿ ಅವರು ಬಹಳಷ್ಟು ಸಹಿಸಿಕೊಂಡಿದ್ದಾರೆ. ಬೆದರಿಕೆಗಳಿಂದಾಗಿ ಅವರು ಮನೆ ತೊರೆದಿದ್ದು, ಈಗ ನಾನು ಅವರನ್ನು ಮತ್ತೆ ಮನೆಗೆ ಕರೆದೊಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
Going home to see my parents, it’s been more than a year since I last met them. They've suffered a lot over the last 15 days and had to leave home because of threats. Will be taking them back to home.
— Abhijeet Dipke (@abhijeet_dipke) June 6, 2026
FYI, today’s protest was just a trailer. Thank you for showing up in such…
ಜೊತೆಗೆ ಇಂದಿನ ಪ್ರತಿಭಟನೆ ಕೇವಲ ಟ್ರೇಲರ್ ಎಂದಿರುವ ಅಭಿಜೀತ್, ಯುವಕರು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದು ನಿಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದು ಅವರು ಹೇಳಿದ್ದಾರೆ. ಜೊತೆಗೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ, ದೆಹಲಿಯ ಜಂತರ್ ಮಂತರ್ನಲ್ಲಿ ಸಾವಿರಾರು ಜನರು ಸೇರಿರುವುದನ್ನು ತೋರಿಸುವ ವೀಡಿಯೊವನ್ನು ದೀಪ್ಕೆ X ನಲ್ಲಿ ಹಂಚಿಕೊಂಡಿದ್ದಾರೆ. ಇದು ಕಾಕ್ರೋಚ್ ಜನತಾ ಪಕ್ಷವನ್ನು ಬೆಂಬಲಿಸಲು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸೇರಿರುವ ಜನಸಮೂಹವಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ತ್ರಿವರ್ಣ ಧ್ವಜ ಮತ್ತು ಡಾ. ಭೀಮರಾವ್ ಅಂಬೇಡ್ಕರ್ ಅವರ ಫೋಟೋಗಳನ್ನು ಹಿಡಿದಿರುವ ಹೆಚ್ಚಿನ ಸಂಖ್ಯೆಯ ಜನರನ್ನು ವೀಡಿಯೊದಲ್ಲಿ ತೋರಿಸಲಾಗಿದೆ. “ಕಾಕ್ರೋಚ್ ಎಂದಿಗೂ ತಲೆಬಾಗುವುದಿಲ್ಲ ಎಂದು ದಿಪ್ಕೆ ಬರೆದುಕೊಂಡಿದ್ದಾರೆ.