Search


TMC ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲೆ ಭೀಕರ ಹಲ್ಲೆ.. ಮೊಟ್ಟೆಯಲ್ಲಿ ಹೊಡೆದು ಆಕ್ರೋಶ

ಪಶ್ಚಿಮ ಬಂಗಾಳ : ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲುಂಡು, ಬಿಜೆಪಿ ಅಧಿಕಾರ ಹಿಡಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಭಾರೀ ರಾಜಕೀಯ ಉದ್ವಿಗ್ನತೆ ಸೃಷ್ಟಿಯಾಗಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಒಳಗಾದ ತಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರತ್ತ ಮೊಟ್ಟೆಗಳನ್ನು ಎಸೆದು ದೈಹಿಕವಾಗಿ ಹಲ್ಲೆ ನಡೆಸಿರುವ ಗಂಭೀರ ಘಟನೆ ಶನಿವಾರ ನಡೆದಿದೆ.

ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್‌ಪುರ ಎಂಬಲ್ಲಿ ಘಟನೆ ನಡೆದಿದ್ದು. ಚುನಾವಣಾ ನಂತರ ಬಿಜೆಪಿ ಕಾರ್ಯಕರ್ತರಿಂದ ದೌರ್ಜನ್ಯಕ್ಕೆ ಒಳಗಾಗಿದ್ದ ಮತ್ತು ಕೊಲ್ಲಲ್ಪಟ್ಟಿದ್ದ tmc ಕಾರ್ಯಕರ್ತನ ಮನೆಗೆ ಅಭಿಷೇಕ್ ಬ್ಯಾನರ್ಜಿ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಎನ್ನಲಾದ ಕೆಲವರು ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ನಡೆಸಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಅವರನ್ನು ಸುತ್ತುವರಿದ ಗುಂಪು, ಅಭಿಷೇಕ್ ಅವರನ್ನು ‘ಚೋರ್, ಚೋರ್’ (ಕಳ್ಳ, ಕಳ್ಳ) ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಂತರ, ಅವರ ಮೇಲೆ ಕೆಲವರು ಮೊಟ್ಟೆಗಳನ್ನು ಎಸೆದು, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ; ಬಿಳಿ ಶರ್ಟ್ ಧರಿಸಿ, ತಲೆಗೆ ಕ್ರಿಕೆಟ್ ಹೆಲ್ಮೆಟ್ ಧರಿಸಿರುವ ಅಭಿಷೇಕ್ ಬ್ಯಾನರ್ಜಿ ಅವರನ್ನು ಕೆಲವರು ತಳ್ಳುತ್ತಾ, ಎಳೆದಾಡುತ್ತಾ ಹಾಗೂ ಆಕ್ರೋಶದಿಂದ ಕೂಗಾಡುತ್ತಿರುವುದು ಕಂಡುಬಂದಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ತಕ್ಷಣವೇ ರಕ್ಷಣಾ ಕವಚಗಳನ್ನು ಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿಗಳು ಉದ್ರಿಕ್ತ ಜನಸಮೂಹದಿಂದ ಅಭಿಷೇಕ್ ಅವರನ್ನು ರಕ್ಷಿಸಿ ಅಲ್ಲಿಂದ ಕರೆದೊಯ್ದಿದ್ದಾರೆ.

ಚಿಕಿತ್ಸೆ ನೀಡಲು ಆಸ್ಪತ್ರೆಯವರಿಂದ ನಿರಾಕರಣೆ..!

TMC ಪಕ್ಷದ ಪ್ರಭಾವಿ ನಾಯಕ, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರಿಗೆ ಕೋಲ್ಕತಾದ ಇಎಂ ಬೈಪಾಸ್ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಲಾಗಿದೆ ಎಂಬ ವಿವಾದ ಈಗ ದೊಡ್ಡ ರಾಜಕೀಯ ಚರ್ಚೆಗೆ ಕಾರಣವಾಗಿದೆ.

By Ravikumar - 31-05-2026


Ads in Post