Search


ವೆಂಟಿಲೇಟರ್ ಸ್ಫೋಟ, ಆಸ್ಪತ್ರೆಯಲ್ಲಿ ಬೆಂಕಿ: 3 ನವಜಾತ ಶಿಶುಗಳು ಸಾವು

ಮಹಾರಾಷ್ಟ್ರದ ಆಸ್ಪತ್ರೆಯೊಂದರ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (NICU) ವೆಂಟಿಲೇಟರ್‌ನಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ನವಜಾತ ಶಿಶುಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಘಟನೆ ನಡೆದ ವೇಳೆ NICUನಲ್ಲಿ ಹಲವು ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ ಬಳಿಕ ಬೆಂಕಿ ವೇಗವಾಗಿ ಹರಡಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಉಳಿದ ಶಿಶುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಈ ದುರ್ಘಟನೆಯಲ್ಲಿ ಮೂವರು ನವಜಾತ ಶಿಶುಗಳು ಮೃತಪಟ್ಟಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೆಂಟಿಲೇಟರ್‌ನ ತಾಂತ್ರಿಕ ದೋಷವೇ ಬೆಂಕಿಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆಸ್ಪತ್ರೆಯ ಅಗ್ನಿ ಸುರಕ್ಷತಾ ವ್ಯವಸ್ಥೆ ಹಾಗೂ ವೈದ್ಯಕೀಯ ಉಪಕರಣಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಘಟನೆಯ ಸಂಪೂರ್ಣ ವಿವರ ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ.

By Ravikumar - 24-08-2026


Ads in Post