ಇಸ್ಲಾಮಾಬಾದ್: ಆಪರೇಷನ್ ಸಿಂಧೂರ್ ನಂತರ ಬಾಲ ಸುಟ್ಟ ಬೆಕ್ಕಿನಂತಾಗಿರುವ ಪಾಕಿಸ್ತಾನ (Pakistan) ವಾರಕೊಮ್ಮೆಯಾದರು ಭಾರತವನ್ನ ಕೆಣಕುವ ಕೆಲಸ ಮಾಡುತ್ತಿದೆ. ಇದೀಗ ಪಾಕ್ನ ಹವಮಾನ ಸಚಿವ ಮುಸಾದಿಕ್ ಮಲಿಕ್ ಎಂಬಾತ ಪ್ರಧಾನಿ ಮೋದಿಗೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದು. "ನೆರೆಯ ದೇಶದ ಪ್ರಧಾನಿ ಕೈಯಲ್ಲಿ ಸಿಂಧೂ ನದಿ ನೀರಿನ ನಲ್ಲಿ ಇದೆ. ಒಂದು ವೇಳೆ ನಮ್ಮ ನೀರು ಬಿಡದಿದ್ದರೆ ಆ ಕೈಗಳನ್ನ ಕತ್ತರಿಸುತ್ತೇವೆ ಎಂದು ಹೇಳಿದ್ದಾನೆ.
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (Indus Waters Treaty) ವಿಚಾರವಾಗಿ ಮತ್ತೊಮ್ಮೆ ಪಾಕ್ ಪ್ರಚೋದನಾಕಾರಿ ಹೇಳಿಕೆ ನೀಡಿ ಉದ್ಧಟತನ ಪ್ರದರ್ಶಿಸಿದೆ. ಇಸ್ಲಾಮಾಬಾದ್ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್, ‘ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನಕ್ಕೆ ಬರಬೇಕಾದ ನೀರಿನ ಪಾಲನ್ನು ಯಾರಾದರೂ ಕಸಿದುಕೊಳ್ಳಲು ಬಂದರೆ, ಅಂತಹವರ ಕೈಗಳನ್ನು ನಾವು ಕತ್ತರಿಸುತ್ತೇವೆ’ ಎಂದು ಭಾರತದ ಹೆಸರು ಉಲ್ಲೇಖಿಸದೆ ಬೆದರಿಕೆ ಹಾಕಿದ್ದಾನೆ.
ಪ್ರಧಾನಿ ಮೋದಿ ಕೈಯಲ್ಲಿ ಕೈಯಲ್ಲಿ ನೀರಿನ ನಲ್ಲಿ ಇದೆ!
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವನ್ನು ಪರೋಕ್ಷವಾಗಿ ಟೀಕಿಸಿದ ಮುಸಾದಿಕ್ ‘ನೆರೆ ದೇಶದ ಪ್ರಧಾನಿಯವರ ಕೈಯಲ್ಲಿ ಒಂದು ನಲ್ಲಿ (ಟ್ಯಾಪ್) ಇದೆ. ಅವರು ಪಾಕಿಸ್ತಾನಕ್ಕೆ ಒಂದು ಹನಿ ನೀರನ್ನೂ ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ನಮ್ಮ ದೇಶದ ಶೇ 40 ರಿಂದ 50 ರಷ್ಟು ಜನಸಂಖ್ಯೆ ಜೀವನಕ್ಕಾಗಿ ಕೃಷಿಯನ್ನೇ ಅವಲಂಬಿಸಿದೆ. ಯಾರೋ ಒಬ್ಬರು ನಮ್ಮ ದೇಶದ ಆಹಾರ ಭದ್ರತೆ, ಶೇ 50 ರಷ್ಟು ಉದ್ಯೋಗ ಮತ್ತು ಶೇ 25 ರಷ್ಟು ಆರ್ಥಿಕತೆಯನ್ನು ನಿಯಂತ್ರಿಸಲು ನೋಡುತ್ತಿದ್ದಾರೆ. ಜಾಗತಿಕವಾಗಿ ಕೆಳಮಟ್ಟದ ಜಲಾನಯನ ಪ್ರದೇಶದ ದೇಶಗಳ ಹಕ್ಕಿನ ಬಗ್ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಾವು ನಾಳೆ ಪ್ರಶ್ನೆ ಮಾಡಲಿದ್ದೇವೆ’ ಎಂದು ಕಿಡಿಕಾರಿದ್ದಾರೆ.
ಕಳೆದ ವರ್ಷ ಪೆಹಲ್ಗಾಂನಲ್ಲಿ ನಡೆದ ಉಗ್ರ ದಾಳಿಯಲ್ಲಿ 27 ಪ್ರವಾಸಿಗರು ಮೃತಪಟ್ಟಿದ್ದರು, ಇದಾದ ನಂತರ 1960ರ ದಶಕದಲ್ಲಿ ಪಾಕಿಸ್ತಾನದೊಂದಿಗೆ ಭಾರತ ಮಾಡಿಕೊಂಡಿದ್ದ ಸಿಂಧೂ ನದಿ ನೀರಿನ ಒಪ್ಪಂದವನ್ನ ಅಮಾನತ್ತಿನಲ್ಲಿಟ್ಟಿತ್ತು. ಈ ಒಪ್ಪಂದದಿಂದ ಭಾರತಕ್ಕೆ ಅನ್ಯಾಯವಾಗುತ್ತಿದೆ, ಪಾಕಿಸ್ತಾನ ಉಗ್ರರಿಗೆ ನೆರವು ನೀಡುವುದನ್ನ ನಿಲ್ಲಿಸುವವರೆಗೆ ಒಪ್ಪಂದ ಅಮಾನತ್ತಿನಲ್ಲಿ ಇಡಲಾಗುತ್ತೆ ಎಂದು ಸ್ಪಷ್ಟ ಪಡಿಸಿತ್ತು.