ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ನೇತೃತ್ವದಲ್ಲಿ ನೂತನ ಸರ್ಕಾರಕ್ಕೆ ಅಸ್ಥಿತ್ವಕ್ಕೆ ಬಂದಿದ್ದು, 13 ಜನ ಶಾಸಕರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಮೀರ್ ಅಹಮ್ಮದ್‌ಗೆ (Zameer Ahmed Khan) ಸಚಿವ ಸ್ಥಾನ ಕೈ ತಪ್ಪಿದ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದ್ದು , ಡಿಕೆ ಸರ್ಕಾರದಲ್ಲಿ ಜಮೀರ್‌ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಆಡಿಯೋ ಸಂಕಷ್ಟ... ಜಮೀರ್‌ಗೆ ಪ್ರಾಣ ಸಂಕಟ..!
ಏಪ್ರೀಲ್ 9ರಂದು ನಡೆದ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಜಮೀರ್ ಕೆಲಸ ಮಾಡಿದ್ದಾರೆ ಎಂಬ ಆರೋಪಗಳು ಮೊದಲನಿಂದಲೂ ಕೇಳಿ ಬರುತ್ತಿದ್ದವು, ಇದರಿಂದಾಗಿ ದಾವಣಗೆರೆಯಲ್ಲಿ ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್ ಬಿಟ್ಟು ಚದುರಿದ್ದವು. ಎಸ್‌ಡಿಪಿಐನ ಅಭ್ಯರ್ಥಿ ಸುಮಾರು 20 ಸಾವಿರ ಮತಗಳನ್ನ ತೆಗೆದುಕೊಂಡು ತೃತೀಯ ಸ್ಥಾನ ಗಳಿಸಿದ್ದರು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಅಲ್ಪ ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದರು ಕೂಡ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಂಬಂತೆ ಭಾವಿಸಲಾಗತ್ತು. ಈ ಎಲ್ಲಾ ಷಡ್ಯಂತ್ರದ ವಿರುದ್ದ ತಮ್ಮದೇ ಪಕ್ಷದ ನಾಯಕರು ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್‌ನ ಕೆಲ ನಾಯಕರು ನೇರವಾಗಿ ವಾಗ್ದಾಳಿ ನಡೆಸಿದ್ದರು. ಜೊತೆಗೆ ಈ ಕುರಿತು ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕಮಾಂಡ್‌ಗೆ ದೂರನ್ನ ನೀಡಲಾಗಿತ್ತು.
ಇಷ್ಟೇಲ್ಲ ಆದರೂ ಕೂಡ ಎಲ್ಲಿಯೂ ಜಮೀರ್ ಅವರ ಹೆಸರನ್ನ ಉಲ್ಲೇಖಿಸಿ ಯಾವೋಬ್ಬ ನಾಯಕರು ಆರೋಪ ಮಾಡಿರಲಿಲ್ಲ, ಆದರೆ ಇತ್ತೀಚೆಗೆ ಜಮೀರ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಆಡಿಯೋದಲ್ಲಿ ಜಮೀರ್ ಅವರ ಧ್ವನಿ ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಮ ಷಡ್ಯಂತ್ರ ರೂಪಿಸಿರುವುದು ಬಹಿರಂಗಗೊಂಡಿತ್ತು. ಅದು ಎಐ (AI) ಸೃಷ್ಟಿತ ಎಂದು ಜಮೀರ್ ಸಮರ್ಥಿಸಿಕೊಂಡಿದ್ದರೂ ವರಿಷ್ಠರು ಅದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಾಗಿ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಅವರನ್ನು ಕೈಬಿಡಲಾಗಿದ್ದು, ಈಗ ಜಮೀರ್ ಅವರ ಹೆಸರನ್ನು ಮೊದಲ ಪಟ್ಟಿಯಿಂದ ದೂರ ಇಡಲಾಗಿದೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಜಮೀರ್‌ಗೆ ಆಯ್ತಾ ಅವಮಾನ..!
ನಿನ್ನೆ (ಜೂನ್ 3) ಲೋಕಭವನದಲ್ಲಿ ಡಿಕೆ ಶಿವಕುಮಾರ್ ಹಾಗೂ ಸಂಪುಟ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ಜಮೀರ್ ಅಹ್ಮದ್ ಖಾನ್ ಅರ್ಧದಲ್ಲೇ ಎದ್ದುಹೋಗಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ಕಾರ್ಯಕ್ರಮದಲ್ಲಿ ಜಮೀರ್‌ಗೆ ಅವಮಾನವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಜೊತೆಗೆ ‘ವಂದೇ ಮಾತರಂ’ ಪ್ರಸಾರವಾಗುತ್ತಿದ್ದ ವೇಳೆಯೇ ಜಮೀರ್ ಎದ್ದುಹೋಗಿರುವ ವಿಡಿಯೋ ವೈರಲ್ ಆಗಿದೆ, ಈ ನಡವಳಿಕೆಗೆ ಸಾರ್ವಜನಿಕ ವಲಯದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೂ ಸಹ ಮುಂದಿನ ದಿನಗಳಲ್ಲಿ ಜಮೀರ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ.