Search


ಅಶೋಕ್‌ ಮಗ, ಮರಿ ಅಶೋಕ್‌ ಯಾಕೆ RSS ಸೇರಿ ಧರ್ಮರಕ್ಷಕನಾಗಿಲ್ಲ; ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು: ʻಬಳ್ಳಾರಿ ಚಲೋʼ ವೇದಿಕೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಪ್ರಿಯಾಂಕ್‌ ಖರ್ಗೆಗೆ ಮರಿ ಖರ್ಗೆ ಎಂದು ಕರೆದು ಟೀಕೆ ಮಾಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ವಿರುದ್ಧ ಪ್ರಿಯಾಂಕ್‌ ಖರ್ಗೆ ಅವರು ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದ್ದು, ʻಮರಿ ಅಶೋಕ್‌ ಯಾಕೆ ಗಣವೇಶ ಧರಿಸಿಲ್ಲ, ಯಾಕೆ ಗೋಮೂತ್ರ ಸೇವಿಸುತ್ತಿಲ್ಲ ಎಂದು ಕಿಡಿಕಾರಿದ್ದು, ಕೆಪಿಎಸ್‌ಸಿ ಹಗರಣದ ಬಗ್ಗೆಯೂ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಖರ್ಗೆ ʻಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ ಚಿಂತೆಗೀಡಾಗಿದ್ದೀರಿ, ಆದರೆ, ನೀವು ಉತ್ತರಿಸಬೇಕಾದ ನಿಜವಾದ ಪ್ರಶ್ನೆಗಳಿವೆ, ಶಿವಶಂಕರಪ್ಪ ಸಾಹುಕಾರ್, ಬಸವರಾಜ ಕನ್ನಾಳೆ ಬಗ್ಗೆ ಯಾವಾಗ ಮಾತನಾಡುತ್ತೀರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರಶ್ನಿಸಿದ್ದಾರೆ.

ಮರಿ ಅಶೋಕ್‌ ಯಾಕೆ ಗಣವೇಶ ಧರಿಸಿಲ್ಲ ?

ಇನ್ನು ಅಶೋಕ್‌ ಅವರ ಪುತ್ರ ಯಾಕೆ RSSಗೆ ಸೇರಿಲ್ಲ ಎಂದು ಕೇಳಿರುವ ಖರ್ಗೆ “ಮರಿ ಅಶೋಕ್ ಏಕೆ ಗಣವೇಶ ಧರಿಸಿಲ್ಲ? ಮರಿ ಅಶೋಕ್ ಏಕೆ ಗೋಶಾಲೆಯಲ್ಲಿ ಗೋಮೂತ್ರ ಸೇವಿಸುತ್ತಿಲ್ಲ? ಮರಿ ಅಶೋಕ್ ಇನ್ನೂ ಧರ್ಮರಕ್ಷಕನಾಗಿ ಏಕೆ ಆಗಿಲ್ಲ?” ಎಂದು ಪ್ರಶ್ನಿಸಿದ್ದಾರೆ. “ಹಿರಿ ಅಶೋಕ್ ಅವರು ಈ ಪ್ರಶ್ನೆಗಳಿಗೆ ಯಾವಾಗ ಉತ್ತರಿಸುತ್ತಾರೆ?” ಎಂದೂ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಜೊತೆಗೆ ಕೆಪಿಎಸ್‌ಸಿ ಸದಸ್ಯರು ಮತ್ತು ಅಧ್ಯಕ್ಷರ ನೇಮಕಕ್ಕೆ ಬಿಜೆಪಿ ನಾಯಕರಿಗೆ ಎಷ್ಟು ಹಣ ಸಂದಾಯವಾಗಿದೆ ಎಂಬ ಆರೋಪದ ಬಗ್ಗೆಯೂ ಅಶೋಕ್‌ ಯಾವಾಗ ಮಾತನಾಡುತ್ತಾರೆ? ಪಕ್ಷಕ್ಕೆ ಸೇರಿದವರ ಚಿತ್ರಗಳ ಬಗ್ಗೆ ಯಾವಾಗ ಮಾತನಾಡುತ್ತೀರಿ ಎಂದೂ ಕೇಳಿದ್ದಾರೆ.

By Ravikumar - 02-09-2026


Ads in Post