ದಾವಣಗೆರೆ: ಗಂಡನೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಘಟನೆ ದಾವಣಗೆರೆಯ ಚನ್ನಗಿರಿಯಲ್ಲಿ (Channagiri) ನಡೆದಿದೆ. ಜೂನ್.3ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳನ್ನ ಪೊಲೀಸರು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.
41 ವರ್ಷದ ಸಂತ್ರಸ್ಥ ಮಹಿಳೆಯು ಜೂನ್.3ರಂದು ಪತಿ ಜಗಳ ಮಾಡಿಕೊಂಡು ತಮ್ಮ ತವರು ಮನೆಗೆ ಹೋಗುತ್ತಿದ್ದರು. ಈ ವೇಳೆ ಹಂದಿ ಬೇಟೆಗೆ ತೆರಳಿದ್ದ ಯುವಕರು ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಕೂಲ್ ಡ್ರಿಂಕ್ಸ್ನಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಬಳಿಕ ತೋಟಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ರಾತ್ರಿಯಿಂದ ಮುಂಜಾನೆಯವರೆಗೂ ಯುವಕರ ಗುಂಪು ವಿಕೃತಿ ಮೆರೆದಿತ್ತು. ಬಳಿಕ ಬೆತ್ತಲೆ ಫೋಟೋ, ವೀಡಿಯೋ ಮಾಡಿಕೊಂಡು ಆರೋಪಿಗಳು ವಿಕೃತ ಸಂತೋಷಪಟ್ಟಿದ್ದರು. ಅಲ್ಲದೇ ಫೋಟೋ ಹಾಗೂ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಘಟನೆ ಸಂಬಂಧ ಮಹಿಳಳೆಯು ಬಸವಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಘಟನೆ ಬಳಿಕ ಗ್ರಾಮದಲ್ಲಿ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರವಾಗುತ್ತಿದ್ದಂತೆ ಆರೋಪಿಗಳು ವೀಡಿಯೋ ಡಿಲೀಟ್ ಮಾಡಿದ್ದಾರೆ. ಇತ್ತ ಘಟನೆ ಸಂಬಂಧ ಸಂತ್ರಸ್ತೆ ಬಸವಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಇಸ್ತ್ರೀ ನಾಗರಾಜ್, ನಾಗರಾಜ್, ಅರ್ಜುನಾ, ಬಸವಂತ, ಕುಂದೂರು ಮಾರುತಿ, ಹೆಗ್ಗ ಮಾರುತಿ, ಮನು, ಜೋಗಿ ಸುನೀಲ್, ಪ್ರದೀಪ್ ಹಾಗೂ ಮಧು ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿಗಳೆಲ್ಲ ಯಲೋದಹಳ್ಳಿಯವರಾಗಿದ್ದಾರೆ.