Search


ಕೈಗೆ ಗಮ್‌ ಹಾಕಿ ಬ್ಯಾಟಿಂಗ್‌ ಮಾಡ್ತೀರಾ ; ಸಾಯಿ ಸುದರ್ಶನ್‌ಗೆ ಪ್ರಶ್ನೆ..!

ಕ್ವಾಲಿಫೈಯರ್‌ 2ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಫೈನಲ್‌ಗೆ ಎಂಟ್ರಿ ಕೊಟ್ಟಿದೆ, ಆದರೆ ಈ ಪಂದ್ಯದಲ್ಲಿ ಬ್ಯಾಟರ್‌ ಸಾಯಿ ಸುದರ್ಶನ್‌ ಮತ್ತೊಮ್ಮೆ ಹಿಟ್‌ ವಿಕೆಟ್‌ ಆಗಿ ಔಟ್‌ ಆಗಿದ್ದು. ಐಪಿಎಲ್‌ ಇತಿಹಾಸದಲ್ಲಿ ಮೂರು ಬಾರಿ ಹಿಟ್​​ ವಿಕೆಟ್ ಆಗಿ ಔಟಾದ ಏಕೈಕ ಬ್ಯಾಟರ್ ಎಂದು ದಾಖಲೆ ನಿರ್ಮಿಸಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಕೈಗೆ ಗ್ಲೂ (ಗಮ್) ಹಾಕಿ ಬ್ಯಾಟಿಂಗ್ ಮಾಡ್ತೀರಾ?  ಎಂಬ ಪ್ರಶ್ನೆ ಮುಂದಿಡಲಾಗಿದೆ.

ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಿಟ್​ ವಿಕೆಟ್ ಆಗಿದ್ದ ಸಾಯಿ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಹಿಟ್ ವಿಕೆಟ್ ಆಗಿ ವಿಕೆಟ್ ಕೈಚೆಲ್ಲಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಸಾಯಿ ಸುದರ್ಶನ್​​ಗೆ, ಅಹಮದಾಬಾದ್​ನಲ್ಲಿ ನಡೆಯಲಿರುವ ಪಂದ್ಯದಲ್ಲಿ ನೀವು ಕೈಗೆ ಗಮ್ ಹಾಕಿ ಬ್ಯಾಟಿಂಗ್ ಮಾಡ್ತೀರಾ? ಎಂದು ನಿರೂಪಕರು ಕೇಳಿದ್ದಾರೆ.

ಇದಕ್ಕೆ ನಗುತ್ತಾ ಉತ್ತರಿಸಿದ ಸಾಯಿ, ನಾನು ಹೊಸದಾಗಿ ಏನನ್ನಾದರೂ ಮಾಡಬೇಕಿದೆ. ಈ ಸಮಸ್ಯೆಗೆ ಪರಿಹಾರವಾಗಿ ಹೊಸದಾಗಿ ‘ಗ್ರಿಪ್ ಟೆಕ್’ ಬಳಸಿ ನೆಟ್ಸ್‌ನಲ್ಲಿ ಕೆಲವು ಎಸೆತಗಳನ್ನು ಎದುರಿಸಿ ಪರೀಕ್ಷಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.ಇದೇ ವೇಳೆ ಎರಡು ಬಾರಿ ಹಿಟ್​ ವಿಕೆಟ್ ಆದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಾಯಿ ಸುದರ್ಶನ್, ಕಳೆದ ಪಂದ್ಯದಲ್ಲಿ ಚೆಂಡು ಬೌನ್ಸ್ ಆಗಿದ್ದ ಪರಿಣಾಮ ಬ್ಯಾಟ್ ಜಾರಿ ಸ್ಟಂಪ್​ಗೆ ಬಡಿಯಿತು. ಈ ಬಾರಿ ನಾನು ನೇರವಾಗಿ ಶಾಟ್ ಬಾರಿಸಲು ಬಯಸ್ಸಿದ್ದೆ. ದುರಾದೃಷ್ಟವಶಾತ್ ಹಿಟ್ ವಿಕೆಟ್ ಆದ ಎಂದರು.

ಇನ್ನು ರಾಜಸ್ಥಾನ ವಿರುದ್ದ ಭರ್ಜರಿ ಗೆಲುವು ಸಾಧಿಸಿ ಫೈನಲ್‌ಗೆ ಎಂಟ್ರಿ ಕೊಟ್ಟಿರುವ ಗುಜರಾತ್‌, ನಾಳೆ (ಭಾನುವಾರ) ಫೈನಲ್‌ನಲ್ಲಿ ಆರ್‌ಸಿಬಿಯನ್ನ ಎದುರಿಸಲಿದ್ದು, ಈ ಪಂದ್ಯಕ್ಕಾಗಿ ಅಹಮದ್‌ಬಾದ್‌ನಲ್ಲಿ ಭರ್ಜರಿ ಸಿದ್ದತೆಗಳು ಆರಂಭಗೊಂಡಿವೆ.

By Ravikumar - 30-05-2026


Ads in Post