Search


ಹೆಂಡತಿಗೆ ಕೈ ಕೊಟ್ಟು ಅತ್ತೆಯೊಂದಿಗೆ ಮದುವೆಯಾದ ಯುವಕ: ಸಾರ್ವಜನಿಕರಿಂದ ಆಕ್ರೋಶ

ಕಾನ್ಪುರ: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಕೈಗ ಕೊಟ್ಟು ಆಕೆಯ ಅಮ್ಮನನ್ನ ಮದುವೆಯಾಗಿರುವ ವಿಲಕ್ಷಣ ಘಟನೆ ನಡೆದಿದ್ದು, ಇದೀಗ ಈ ಕುರಿತಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಫೋಟೋ ಎಲ್ಲೆಡೆ ಹರಿದಾಡುತ್ತಿದೆ. ಇವರಿಬ್ಬರು ನ್ಯಾಯಾಲಯದಲ್ಲಿ ನೋಂದಾಯಿತ ವಿವಾಹ ಮಾಡಿಕೊಂಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ಭಾರಿ ಸಂಚಲನ ಮೂಡಿಸಿದ್ದು, ಕೌಟುಂಬಿಕ ಸಂಬಂಧಗಳ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಅತ್ತೆ-ಅಳಿಯನ ನಡುವೆ ಪ್ರೇಮಾಂಕುರ..!

ಕಾನ್ಪುರದ ನಿವಾಸಿಯೊಬ್ಬರಿಗೆ ಕೆಲವು ವರ್ಷಗಳ ಹಿಂದೆ ವಿವಾಹವಾಗಿತ್ತು. ಮದುವೆಯಾದ ಆರಂಭದಲ್ಲಿ ದಂಪತಿಯ ನಡುವೆ ಎಲ್ಲವೂ ಸರಿಯಾಗಿಯೇ ಇತ್ತು. ಆದರೆ, ಕಾಲಕ್ರಮೇಣ ಪತ್ನಿಯ ತಾಯಿ ಈ ದಂಪತಿಗಳ ಮನೆಗೆ ಆಗಾಗ ಬಂದು ಉಳಿದುಕೊಳ್ಳಲು ಆರಂಭಿಸಿದ್ದರು. ಈ ಸಮಯದಲ್ಲಿ ಅಳಿಯ ಮತ್ತು ಅತ್ತೆಯ ನಡುವೆ ಪ್ರೇಮಾಂಕುರವಾಗಿದೆ ಎನ್ನಲಾಗಿದೆ.

 

ಅತ್ತೆಯೊಂದಿಗಿನ ಸಂಬಂಧ ದಿನದಿಂದ ದಿನಕ್ಕೆ ಆಳವಾಗುತ್ತಿದ್ದಂತೆ, ಆ ವ್ಯಕ್ತಿ ತನ್ನ ಪತ್ನಿಯಿಂದ ದೂರವಾಗಲು ನಿರ್ಧರಿಸಿದ್ದ. ಕೌಟುಂಬಿಕ ಕಲಹ ಹಾಗೂ ಭಿನ್ನಾಭಿಪ್ರಾಯಗಳ ನೆಪವೊಡ್ಡಿ ಆತ ನ್ಯಾಯಾಲಯದ ಮೂಲಕ ತನ್ನ ಪತ್ನಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡಿದ್ದ. ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ಆ ವ್ಯಕ್ತಿ ತನ್ನ ಮಾಜಿ ಪತ್ನಿಯ ತಾಯಿಯನ್ನು ಅಂದರೆ ತನ್ನ ಅತ್ತೆಯನ್ನು ಮದುವೆಯಾಗಲು ನಿರ್ಧರಿಸಿದ್ದ. ಇಬ್ಬರೂ ಒಮ್ಮತದಿಂದ ನ್ಯಾಯಾಲಯದಲ್ಲಿ ವಿವಾಹವಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ವಿಚಿತ್ರವಾದ ಮದುವೆಗೆ ಕುಟುಂಬದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

By Ravikumar - 10-06-2026


Ads in Post