Search


ರಾಹುಲ್ ಗಾಂಧಿಗೆ ವೇದಿಕೆ ಮೇಲೆ ಕಿಸ್ ಕೊಟ್ಟ ಯುವತಿ; ವಿಡಿಯೋ ವೈರಲ್

ಮಹಾರಾಷ್ಟ್ರ : ಪುಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಕಾರ್ಯಕ್ರಮವೊಂದು ಇದೀಗ ಮತ್ತೊಂದು ಕಾರಣಕ್ಕೆ ಗಮನ ಸೆಳೆಯುತ್ತಿದೆ. ಯುವಕರೊಂದಿಗೆ ಸಂವಾದ ನಡೆಸುತ್ತಿದ್ದ ವೇಳೆ ಸೆಲ್ಫಿಗಾಗಿ ವೇದಿಕೆಗೆ ಬಂದ ವಿದ್ಯಾರ್ಥಿನಿಯೊಬ್ಬರು ರಾಹುಲ್ ಗಾಂಧಿ ಅವರ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಣೆಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಛಾತ್ರೋಂ ಕೀ ಗೂಂಜ್’ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸಿದ್ದರು. ಸಂವಾದದ ಬಳಿಕ ರಾಹುಲ್ ಗಾಂಧಿ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ತೆಗೆಸಿಕೊಳ್ಳುತ್ತಿದ್ದರು.

ಈ ವೇಳೆ ವೇದಿಕೆಗೆ ಬಂದ ವಿದ್ಯಾರ್ಥಿನಿಯೊಬ್ಬರು ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡಿದ್ದಾರೆ. ಸೆಲ್ಫಿ ವೇಳೆ ಏಕಾಏಕಿ ಅವರ ಕೆನ್ನೆಗೆ ಮುತ್ತಿಟ್ಟಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ರಾಹುಲ್ ಗಾಂಧಿ ಕೆಲ ಕ್ಷಣ ಅಚ್ಚರಿಗೊಂಡಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಬಳಿಕ ವಿದ್ಯಾರ್ಥಿನಿಯೊಂದಿಗೆ ಮಾತನಾಡಿ, ಭದ್ರತಾ ಸಿಬ್ಬಂದಿಯೊಂದಿಗೆ ಅವರು ವೇದಿಕೆಯಿಂದ ತೆರಳಿದ್ದಾರೆ.

ಘಟನೆಯ ಬಳಿಕ 11ನೇ ತರಗತಿ ವಿದ್ಯಾರ್ಥಿನಿ ಮರಿಯಂ ಮಾತನಾಡಿದ್ದು, ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾಳೆ. ಭವಿಷ್ಯದಲ್ಲಿ ರಾಹುಲ್ ಗಾಂಧಿ ಅವರಂತೆ ಬೆಳೆಯಬೇಕು ಹಾಗೂ ಅವರ ಹೆಜ್ಜೆಗುರುತುಗಳನ್ನು ಅನುಸರಿಸಬೇಕು ಎಂಬುದು ತನ್ನ ಕನಸು ಎಂದು ಆಕೆ ಹೇಳಿದ್ದಾಳೆ.

ಯುವಕರಲ್ಲಿ ರಾಹುಲ್ ಗಾಂಧಿ ಪ್ರಭಾವ ಹೊಂದಿದ್ದಾರೆ ಎಂದು ವಿದ್ಯಾರ್ಥಿನಿ ಅಭಿಪ್ರಾಯಪಟ್ಟಿದ್ದಾಳೆ. ಇದೀಗ ವಿದ್ಯಾರ್ಥಿನಿಯ ಹೇಳಿಕೆ ಹಾಗೂ ಕಾರ್ಯಕ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ. ಕಾರ್ಯಕ್ರಮದ ವೇಳೆ ನಡೆದ ಸಂವಾದ, ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ತೆಗೆಸಿಕೊಂಡ ಸೆಲ್ಫಿ ಹಾಗೂ ವೇದಿಕೆಯಲ್ಲಿನ ಹಲವು ಕ್ಷಣಗಳ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

By Ravikumar - 24-08-2026


Ads in Post