ಬೆಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಜನವರಿ ಮೊದಲ ವಾರದಲ್ಲೇ ಎರಡೂ ಚುನಾವಣೆಗಳನ್ನು ನಡೆಸಲು ಸಂಪುಟದಲ್ಲಿ ಒಲವು ವ್ಯಕ್ತವಾಗಿದ್ದು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಬಳಿಕ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಇನ್ನು, ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಎಸ್ಐಆರ್ (SIR) ವಿಚಾರವೂ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ. ಫಾರಂ ನಂಬರ್ 7ರ ವಿವಾದದ ತನಿಖೆಗೆ ಎಸ್ಐಟಿ ರಚನೆಗೆ ಅವಕಾಶ ಇಲ್ಲದಿರುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ವಿಚಾರದಲ್ಲಿ ಮುಂದಿನ ಕ್ರಮಗಳ ಬಗ್ಗೆಯೂ ಸಮಾಲೋಚನೆ ನಡೆದಿದೆ ಎನ್ನಲಾಗಿದೆ.
ಈಗಾಗಲೇ ಎಫ್ಐಆರ್ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಸ್ಥಳೀಯ ಮಟ್ಟದಲ್ಲೇ ಮತ್ತಷ್ಟು ಚುರುಕುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಎಸ್ಐಆರ್ಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ಹಾಗೂ ಚುನಾವಣಾ ಪ್ರಕ್ರಿಯೆಗಳನ್ನು ಸಮನ್ವಯಗೊಳಿಸುವ ಬಗ್ಗೆಯೂ ಸರ್ಕಾರ ಗಮನಹರಿಸಿದೆ ಎಂದು ತಿಳಿದುಬಂದಿದೆ.